ತುಮಕೂರು: ನಾನು ಹೊರಗಿನವನು ಎಂಬುದರಲ್ಲಿ ಅರ್ಥವಿಲ್ಲ. ತುಮಕೂರಿನ ಮೂಲ ಎಂದರೆ ಐದಾರು ಸಾವಿರ ಜನ ದೊರೆಯಬಹುದು. ಹಾಗೆ ನೋಡಿದರೆ ಬೆಂಗಳೂರಿಗೂ ನಾನು ಹೊರಗಿನವನು. ನನ್ನನ್ನು ಹೊರಗಿನವ ಎಂದು ಪ್ರಚಾರ ಮಾಡುತ್ತಿರುವ ನಾಯಕರಿಗೆ ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು, ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿ. ಸೋಮಣ್ಣ ಹೇಳಿದರು.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸುಳ್ಳು ಹೇಳಿ ಹೋಗುವ ಜಾಯಮಾನ ನನ್ನದಲ್ಲ. ಇಂದು ಅನೇಕ ಜನ ಹಿಂದುಳಿದ ವರ್ಗಗಳ ನಾಯಕರು ನಮ್ಮೊಂದಿಗೆ ಕೈಜೋಡಿಸಿ ಇಲ್ಲಿಗೆ ಆಗಮಿಸಿದ್ದಾರೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬುದು ನಮ್ಮೆಲ್ಲರ ಮುಂದಿರುವ ಗುರಿ ಎಂದರು.

2047ಕ್ಕೆ ಈ ದೇಶವನ್ನು ವಿಶ್ವದ ನಂಬರ್ ಒನ್ ಅರ್ಥಿಕತೆ ಹೊಂದಿದ ದೇಶವನ್ನಾಗಿಸುವ ಗುರಿ ಹೊಂದಿದ್ದಾರೆ. ಅವರ ಕೈ ಬಲಪಡಿಸುವ ಕೆಲಸ ತುಮಕೂರಿನಿಂದಲೂ ಆಗಬೇಕೆಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ.ಬಿ. ಜೋತಿಗಣೇಶ್, ಪಕ್ಷದ ಮುಖಂಡರಾದ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಧನಿಯಕುಮಾರ್, ಮಲ್ಲಸಂದ್ರ ಶಿವಣ್ಣ, ಪಂಚಾಕ್ಷರಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


