ರಾಜಕಾರಣದಲ್ಲಿ ನನಗೆ ಯಾವತ್ತೂ ವಿಪಕ್ಷದಿಂದ ತೊಂದರೆ ಆಗಿಲ್ಲ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಅವರು, ಇಡಿ, ಐಟಿ ಮೂಲಕ ಯಾವತ್ತೂ ವಿಪಕ್ಷಗಳು ತೊಂದರೆ ನೀಡಿಲ್ಲ.
ಜೊತೆಯಲ್ಲಿರುವ ಸ್ನೇಹಿತರೇ ಬೆನ್ನಿಗೆ ಚೂರಿಯಿಂದ ಇರಿದಾಗ ನೋವಾಗಿದೆ. ಅದನ್ನು ತಡೆದುಕೊಂಡಿರುವುದೇ ದೊಡ್ಡದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಆಗಾಗ ಅಸಮಾಧಾನ ಹೊರ ಹಾಕುವ ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್ ಈಗ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.


