nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶಕ್ಕೆ ದ್ರೋಹಿಯಾಗುವುದಕ್ಕಿಂತ ದೇಹಿಯಾಗುವುದು ಲೇಸು: ಹಿರೇಮಗಳೂರು ಕಣ್ಣನ್
    ತುಮಕೂರು January 20, 2025

    ದೇಶಕ್ಕೆ ದ್ರೋಹಿಯಾಗುವುದಕ್ಕಿಂತ ದೇಹಿಯಾಗುವುದು ಲೇಸು: ಹಿರೇಮಗಳೂರು ಕಣ್ಣನ್

    By adminJanuary 20, 2025No Comments2 Mins Read
    tumakuru vv

    ತುಮಕೂರು: ದೇಶ ಹಾಗೂ ಸಂಸ್ಕೃತಿಗೆ ದ್ರೋಹಿಯಾಗಿ ಬದುಕುವುದಕ್ಕಿಂತ ದೇಹಿಯಾಗಿ ಬದುಕುವುದೇ ಲೇಸು. ನಾಡು, ನೆಲ, ಸಂಸ್ಕೃತಿ, ಭಾಷೆ, ದೇಶ ಮರೆತರೆ ಅದಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ವಾಗ್ಮಿ ಹಿರೇಮಗಳೂರು ಕಣ್ಣನ್‌ ಅಭಿಪ್ರಾಯಪಟ್ಟರು.

    ತುಮಕೂರು ವಿಶ್ವವಿದ್ಯಾನಿಲಯದ ಪ್ರೇರಣಾ ಉಪನ್ಯಾಸ ಮಾಲೆಯ ಅಂಗವಾಗಿ ಸೋಮವಾರ ‘ಭಾಷೆ, ಸಂಸ್ಕೃತಿ ಮತ್ತುಯುವಜನತೆ’ ಕುರಿತು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.


    Provided by
    Provided by

    ಜಗತ್ತಿನ ಎಲ್ಲ ದೇಶಗಳ ಹುಟ್ಟಿದ ದಿನಾಂಕವನ್ನುಗುರುತಿಸಲು ಸಾಧ್ಯವಿದೆ. ಆದರೆ ಭಾರತ ದೇಶಕ್ಕೆ ಮಾತ್ರ ಹುಟ್ಟಿನ  ದಿನಾಂಕವಿಲ್ಲ. ಯಾವ ದೇಶಕ್ಕೆ ಹುಟ್ಟಿನ ದಿನಾಂಕವಿರುವುದಿಲ್ಲವೋ,  ಆ ದೇಶಕ್ಕೆ ಸಾವಿನ ದಿನಾಂಕವೂ ಇರುವುದಿಲ್ಲ. ಸನಾತನ ಭಾರತಕ್ಕೆ ಅಷ್ಟು ಆಳವಾದ ಇತಿಹಾಸವಿದೆ ಎಂದರು.

    ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾ ನಿಲಯದ ಆಶಯವನ್ನುಅರ್ಥಮಾಡಿಕೊಂಡು ವಿಶ್ವಮಾನವತೆಯನ್ನು ರೂಢಿಸಿಕೊಳ್ಳಬೇಕು. ವಿಜ್ಞಾನಿ ಬುದ್ಧಿ, ತತ್ವಜ್ಞಾನಿ ಮನಸ್ಸು ಹಾಗೂ ಕವಿ ಹೃದಯ ಬೆಳೆಸಿಕೊಂಡರೆ ಬದುಕು ಹಸನಾಗುತ್ತದೆ ಎಂದರು.

    ತಾಯಿ, ತಾಯ್ನಾಡು, ತಂದೆ, ತಾಯ್ನುಡಿ– ಈ ನಾಲ್ಕನ್ನು ಜೀವನದಲ್ಲಿ ಮರೆಯಬೇಡಿ. ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಸಂಸ್ಕೃತಿ ಯುವಜನಾಂಗದ್ದುಆಗಬಾರದು. ಸಾಧಕರ ಜೀವನ ಚರಿತ್ರೆಗಳನ್ನು ಓದಿ ಅದರಿಂದ ಪ್ರೇರಣೆ ಪಡೆಯುವುದನ್ನು ರೂಢಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಬೀಗುವುದು ಬದುಕಲ್ಲ, ಬಾಗುವುದು ಬದುಕು. ನಾವು ಬಾಳೆಯಂತೆ ಬಾಗಬೇಕು. ಭಾಷೆ ಸಂವಹನಕ್ಕೆ ತೊಡಕಾಗಬಾರದು. ಭಾಷೆಗಿಂತ ಭಾವನೆ ಮುಖ್ಯ. ಅನುಕಂಪ, ಕಾಳಜಿ, ಪ್ರೀತಿ ಮತ್ತು ಸಹಕಾರ ನಮ್ಮ ಬದುಕಿನ ಧ್ಯೇಯವಾಗಬೇಕು ಎಂದರು.

    ಪ್ರಾಸ್ತಾವಿಕ ಮಾತುಗಳನ್ನಾಡಿದ ಪಾವಗಡ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿ ಜಪಾನಂದಜಿ  ಮಹಾರಾಜ್, ಕನ್ನಡ ಮಾತನಾಡಲು ಕಷ್ಟಪಡುವ ನಾವು ನವೆಂಬರ್‌ಕನ್ನಡಿಗರಾಗಿದ್ದೇವೆ. ಮೊದಲು ನಮ್ಮ ದೇಶವನ್ನು ಪ್ರೀತಿಸಬೇಕು. ರಾಷ್ಟ್ರೀಯತೆ, ಜೀವನ, ಧರ್ಮದ ಮೂಲಗಳನ್ನು ಅರಿಯಬೇಕು ಎಂದರು.

    ವಿವೇಕಾನಂದರ ವಿಚಾರಗಳಿಂದ ಎಷ್ಟೋ ಜನ ಭಾರತದ ಮೇಲೆ ಪ್ರೀತಿ ಬೆಳೆಸಿಕೊಂಡಿದ್ದಾರೆ. ವಿವೇಕಾನಂದರ ಧ್ಯೇಯಗಳನ್ನು ಕಾರ್ಯರೂಪಕ್ಕೆ ತಂದಾಗ ಮಾತ್ರ ಭವ್ಯ ಭಾರತದ ನಿರ್ಮಾಣವಾಗುತ್ತದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಶಿಕ್ಷಣದೊಂದಿಗೆ  ಸಂಸ್ಕಾರ ಬೆಳೆಸುವ ಉದ್ದೇಶದಿಂದ ಪ್ರೇರಣಾ ಉಪನ್ಯಾಸ ಮಾಲೆಯನ್ನುಆರಂಭಿಸಲಾಗಿದೆ. ಅಂಕ ಮತ್ತು ಪದವಿಗಳಿಂದ ಮಾತ್ರ ಜೀವನ ಸಾರ್ಥಕವಾಗುವುದಿಲ್ಲ,  ಯಾವುದೇ ಕೆಲಸವನ್ನು ಶ್ರದ್ಧೆಯಿಂದ, ನಿಷ್ಠೆಯಿಂದ ಮಾಡಿದರೆ ಮಾತ್ರ ಯಶಸ್ಸು ಸಾಧ್ಯ ಎಂದರು.

    ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್‌ ಜಮ್, ಮೌಲ್ಯಮಾಪನ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ಪ್ರೇರಣಾ ಉಪನ್ಯಾಸ ಕಾರ್ಯಕ್ರಮ ಸಮಿತಿಯ ಅಧ್ಯಕ್ಷ ಪ್ರೊ. ಬಿ. ರವೀಂದ್ರ ಕುಮಾರ್ ಉಪಸ್ಥಿತರಿದ್ದರು. ಡಾ. ಸಿಬಂತಿ ಪದ್ಮನಾಭ ಕೆ.ವಿ. ನಿರೂಪಿಸಿದರು. ಡಾ. ಅರುಣ್‌ ಕುಮಾರ್ ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?

    March 4, 2026

    ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ

    March 4, 2026

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.