ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆಯಿಂದಾಗಿ ರಾಜ್ಯದಾದ್ಯಂತ ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ರಾಜ್ಯ ಸರ್ಕಾರವನ್ನು ಟೀಕಸಿದ್ದಾರೆ.
ಮಾಗಡಿಯ ಮತ್ತೀಕೆರೆ ಗ್ರಾಮದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಮೂಲಭೂತ ಸೌಲಭ್ಯಗಳಿಗೆ ಶಾಶ್ವತವಾಗಿ ಅನುದಾನವನ್ನು ಒದಗಿಸಬೇಕು. ಆದರೆ, ಸರ್ಕಾರ ಈ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಬೆಂಗಳೂರಿನ ಹಲವು ರಸ್ತೆಗಳು ಮತ್ತು ಫ್ಲೈಓವರ್ ಗಳ ನಿರ್ಮಾಣ ಕಾಮಗಾರಿಗಳು ಅರ್ಧಕ್ಕೆ ನಿಂತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಸ್ತೆಗಳಲ್ಲಿ ಇರೋದು ಗುಂಡಿಗಳೋ ಇಲ್ಲವೇ ಬಾವಿಗಳೋ ಗೊತ್ತಾಗುವುದಿಲ್ಲ, ಇಂತಹ ಸ್ಥಿತಿಯನ್ನು ಸರಿಪಡಿಸಲು ಸರ್ಕಾರ ಗಮನಹರಿಸಬೇಕು ಎಂದು ಛಾಟಿ ಬೀಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW