ಮೈಸೂರು: ನಗರಾಭಿವೃದ್ಧಿ ಪ್ರಾಧಿಕಾರ–ಮುಡಾದಿಂದ ಒಂದೇ ದಿನ 848 ನಿವೇಶನಗಳು ಹಂಚಿಕೆಯಾಗಿದೆ ಎನ್ನುವ ಮಾಹಿತಿ ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಒಂದೇ ದಿನ ಇಷ್ಟೊಂದು ನಿವೇಶನಗಳು ಹಂಚಿಕೆಯಾಗಿರುವುದು ನನಗೆ ಹೊಸ ವಿಚಾರ. ಮುಡಾ ಪ್ರಕರಣದಲ್ಲಿ ತನಿಖೆಗೆ ನ್ಯಾಯಾಂಗ ಆಯೋಗ ರಚನೆಯಾದ ಮೇಲೆ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಏನೇ ಇದ್ದರೂ ಆಯೋಗವೇ ವಿಚಾರಣೆ ನಡೆಸಬೇಕು. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸರ್ಕಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
2022 ರಲ್ಲಿ ಆಗಿನ ಮುಡಾ ಅಧ್ಯಕ್ಷರಾಗಿದ್ದ ರಾಜೀವ್ ಅವರು ಒಂದೇ ದಿನ 848 ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನಗೆ ತಿಳಿದಿಲ್ಲ. ಈ ಬಗ್ಗೆ ಕಾರ್ಯದರ್ಶಿಗಳಿಗೆ ಪತ್ರ ರವಾನೆಯಾಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q