ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆ ಮಾಡಿಸಿಕೊಂಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಒಂದೇ ದಿನದಲ್ಲಿ ಸುಮಾರು 800ಕ್ಕೂ ಹೆಚ್ಚು ಸೈಟುಗಳಿಗೆ ಕಾನೂನು ಬಾಹಿರವಾಗಿ ಖಾತೆ ಮಾಡಿರುವುದು ಲೋಕಾಯುಕ್ತ ಪೊಲೀಸರಿಗೆ ಇನ್ನು ಕಿವಿಗೆ ಕೇಳಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಾಯುಕ್ತ ಪೊಲೀಸರು ಕಾಂಗ್ರೆಸ್ ಸರ್ಕಾರದ ಕಾವಲು ಪಡೆಯಂತೆ ವರ್ತಿಸುತ್ತಿರುವುದು ಆಘಾತಕಾರಿ ವಿಷಯವಾಗಿದೆ. ಲೋಕಾಯುಕ್ತ ಪೊಲೀಸರು ಇಂತಹ ಗಂಭೀರ ವಿಷಯಗಳ ತನಿಖೆಯನ್ನು ನಡೆಸಲಾಗದಾಗ, ಲೋಕಾಯುಕ್ತವನ್ನು ವಿಸರ್ಜಿಸುವುದು ಒಳ್ಳೆಯದುʼ ಎಂದು ಯತ್ನಾಳ್ ಕೆಂಡಾಮಂಡಲವಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


