ದಾವಣಗೆರೆ: ನಗರೋತ್ಥಾನ ಯೋಜನೆಯಡಿ ಕಾಮಗಾರಿಯ ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ಬಗ್ಗೆ ದೂರು ನೀಡಿದರೆ ತನಿಖೆ ನಡೆಸಿ, ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಲ್ ಪಾಸು ಮಾಡಲು ಅಧಿಕಾರಿಗಳು ಸತಾಯಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.
ಇನ್ನೂ ಅಡ್ವಾಣಿಯವರಿಗೆ ಭಾರತ ರತ್ನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ನಾನು ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಕೊಡಬೇಕು ಎಂದು ಪತ್ರ ಬರೆದಿದ್ದೆ. ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಸಿಗಬೇಕು ಎಂಬುದು ನಮ್ಮ ಆಸೆಯಾಗಿತ್ತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.


