ಹಾಸನ: ಎತ್ತಿನಹೊಳೆ ಯೋಜನೆಯ ಶಂಕು ಸ್ಥಾಪನೆಗೆ ಆಗ ಜೆಡಿಎಸ್ ನಲ್ಲಿದ್ದ ಶಾಸಕ ಶಿವಲಿಂಗೇಗೌಡ ಮಾತ್ರ ಬಂದಿದ್ದರು. ಪದೇಪದೇ ತಮ್ಮನ್ನು ತಾವೇ ಮಣ್ಣಿನ ಮಕ್ಕಳು ಎಂದು ಕರೆದುಕೊಳ್ಳುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಕುಟುಂಬದವರು ಈ ಯೋಜನೆ ವಿರೋಧ ವ್ಯಕ್ತಪಡಿಸಿದ್ದರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.
ಹಾಸನದಲ್ಲಿ ಮಾತನಾಡಿದ ಅವರು, ಎತ್ತಿನ ಹೊಳೆ ಯೋಜನೆಯು ಅರಸಿಕೇರೆ ಕ್ಷೇತ್ರಕ್ಕೆ ಇರಲಿಲ್ಲ. ಶಿವಲಿಂಗೇಗೌಡ ಅವರ ಶ್ರಮದಿಂದ ಕ್ಷೇತ್ರದ ಜನರು ನೀರು ಕಾಣುವಂತಾಯಿತು ಎಂದು ಶಿವಲಿಂಗೇಗೌಡ ಅವರನ್ನು ಸಿಎಂ ಹಾಡಿ ಹೊಗಳಿದರು.
ಇದೇ ವೇಳೆ ಸಂಸದ ಅನಂತ ಕುಮಾರ್ ಹೆಗಡೆ ಅವರು ಸಿದ್ದರಾಮುಲ್ಲಾಖಾನ್ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಅಲ್ಪ ಸಂಖ್ಯಾತರ ವಿರೋಧಿಗಳು. ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಎಂದು ಸಿಎಂ ತಿರುಗೇಟು ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


