ಮದ್ರಾಸ್‌ನ ಐಐಟಿಯಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪಶ್ಚಿಮ ಬಂಗಾಳ ಮೂಲದ ಮತ್ತು ಪಿಎಚ್‌ಡಿ ವಿದ್ಯಾರ್ಥಿ ಸಚಿನ್ (32) ಅವರ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ವರ್ಷ ಸಂಸ್ಥೆಯಲ್ಲಿ ನಡೆದ ಮೂರನೇ ಆತ್ಮಹತ್ಯೆ ಇದಾಗಿದೆ.
ಮೃತದೇಹ ಕೋಣೆಯಲ್ಲಿ ನೇತಾಡುತ್ತಿತ್ತು. ಸಚಿನ್ ಆತ್ಮಹತ್ಯೆಗೂ ಮುನ್ನ ‘ಕ್ಷಮಿಸಿ, ನನ್ನಿಂದ ಸಾಧ್ಯವಿಲ್ಲ’ ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಟೇಟಸ್ ನೋಡಿದ ಸ್ನೇಹಿತರು ಕೊಠಡಿಗೆ ತಲುಪಿದಾಗ ಸಚಿನ್ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.
ಈ ವರ್ಷದ ಆರಂಭದಲ್ಲಿ ಚೆನ್ನೈನ ಐಐಟಿ ಕ್ಯಾಂಪಸ್‌ನಲ್ಲಿ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿ ಮತ್ತು ಸಂಶೋಧನಾ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


