ರಾಜ್ಯದಲ್ಲಿ ಕಾಂಗ್ರೆಸ್ ಗೆ ಅಧಿಕಾರ ಸಿಕ್ಕಿದೆ ಎಂದು ಲೂಟಿ ಹೊಡೆಯುವುದಲ್ಲ. ಎಂದು ಹೆಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ, ಅಧಿಕಾರ ಸಿಕ್ಕಿದೆ ಎಂದು ಸ್ಟೇಚ್ಛಾಚಾರ ಪ್ರದರ್ಶನ ಮಾಡುವುದಲ್ಲ. ಚೆಲುವರಾಯಸ್ವಾಮಿ ಅವರು ರಾಜ್ಯದಲ್ಲಿ ಸಚಿವರಾಗಿದ್ದಾರೆ. ಲೂಟಿ ಮಾಡುವುದನ್ನು ಬಿಟ್ಟು ಜನರ ಸೇವೆ ಮಾಡಲಿ. ಅವರು ಪ್ರಾಮಾಣಿಕರಾದ್ರೆ, ರಾಜ್ಯಪಾಲರವರೆಗೂ ದೂರು ಹೋಗಿದ್ದೇಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾತನ್ನಾಡುವುದು ಬಹಳ ಇದೆ. ಎಲ್ಲವನ್ನೂ ಮಾತನ್ನಾಡುತ್ತೇನೆ. ಇಂದೇ ಎಲ್ಲಾ ಏಕೆ ಮಾತನ್ನಾಡಬೇಕು? ನಾಳೆ, ನಾಡಿದ್ದು ಮಾತನ್ನಾಡಲೇಬೇಕು. ನಿಮ್ಮ ಮುಂದೆಯೇ ತಾನೇ ಎಲ್ಲವನ್ನೂ ಹೇಳಬೇಕು. ಖಂಡಿತವಾಗಿ ಎಲ್ಲವನ್ನೂ ಹೇಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಿನ್ನೆ ತಡರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನನಿಲ್ದಾಣದ ಬಳಿ ಮಾಧ್ಯಮಗಳ ಮುಂದೆ ಮಾತನಾಡಿದ ಕುಮಾರಸ್ವಾಮಿ, ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ನನ್ನ ನೋಡಿದ್ರೆ ಕಾಂಗ್ರೆಸ್ ಗೆ ಭಯವಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಿನ್ನೆ ತಡರಾತ್ರಿ 11:30 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ನನ್ನನ್ನು ನೋಡಿದ್ರೆ ಕಾಂಗ್ರೆಸ್ ಗೆ ಭಯವಿದೆ ಎಂದು ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


