ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಸೋಮಜಾಳ (54) ಹೃದಯಾಘಾತದಿಂದ ನಿಧನರಾಗಿದ್ದು ಈ ಹಿನ್ನೆಲೆಯಲ್ಲಿ ಇಂದಿನ ಜೆಡಿಎಸ್ ಪಂಚರತ್ನಯಾತ್ರೆ ರದ್ದಾಗಿದೆ.
ನಿನ್ನೆ ನಾಗಠಾಣ ಕ್ಷೇತ್ರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಪಕ್ಷದ ಪಂಚರತ್ನ ಕಾರ್ಯಕ್ರಮದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರ ಜೊತೆ ಪಾಲ್ಗೊಂಡು ನಂತರ ಸಾಯಂಕಾಲ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು.
ರಾತ್ರಿ 9 ರ ವೇಳೆ ಅಸ್ವಸ್ಥಗೊಂಡ ಶಿವಾನಂದ ಪಾಟೀಲ್ ಸೋಮಜಾಳ ಅವರನ್ನ ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ತೀವ್ರ ಹೃದಯಾಘಾತದಿಂದ ಶಿವಾನಂದ ಮೃತಪಟ್ಟಿದ್ದಾರೆ ಎಂದು ವೈದ್ಯರ ಹೇಳಿದ್ದಾರೆ.
ಶಿವಾನಂದ ಅವರು ನಿಧನ ಹಿನ್ನೆಲೆ ಇಂದು ಮುದ್ದೇಬಿಹಾಳದಲ್ಲಿ ನಡೆಯಬೇಕಿದ್ದ ಜೆಡಿಎಸ್ ಪಂಚರತ್ನಯಾತ್ರೆಯನ್ನ ನಾಳೆಗೆ ಮುಂದೂಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


