ಬಾಗಲಕೋಟೆ: ಜಿಲ್ಲೆ ತೇರದಾಳ ಕ್ಷೇತ್ರ ವ್ಯಾಪ್ತಿಯ ರಬಕವಿಬನಹಟ್ಟಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್, ಸವದಿ ವಿರುದ್ಧ ಅಮಿತ್ ಶಾ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಲಿಂಗಾಯತರಿಗೆ ಅವಮಾನ ಮಾಡಿರುವ ಪಕ್ಷಕ್ಕೆ ಹೋಗಿದ್ದಾರೆ. ಕಾಂಗ್ರೆಸ್ಗೆ ಆ ಇಬ್ಬರು ನಾಯಕರಿಂದ ಯಾವುದೇ ಲಾಭವಿಲ್ಲ. ಲಿಂಗಾಯತ ಸಿಎಂಗಳನ್ನು ಅವಮಾನಿಸಿದ್ದು ಕಾಂಗ್ರೆಸ್ ಪಕ್ಷ. ಆದರೆ ಬಿಜೆಪಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದೆ.
ಮಾಜಿ ಸಿಎಂ ಬಿಎಸ್ವೈಗೆ ಮೋಸ ಮಾಡಿದ್ದು ಜೆಡಿಎಸ್ನವರು. ಜೆಡಿಎಸ್ ಎಷ್ಟೇ ಸೀಟ್ ಗೆದ್ದರೂ ಕಾಂಗ್ರೆಸ್ ಜತೆ ಹೋಗ್ತಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿಗೆ ಮತ್ತೊಮ್ಮೆ ಸ್ಪಷ್ಟ ಬಹುಮತ ನೀಡಿ. ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಗೈದಿದ್ದು ಪಿಎಫ್ಐನವರು. ಪಿಎಫ್ಐ ಸಂಘಟನೆಯನ್ನು ಮೋದಿ ಸರ್ಕಾರ ನಿಷೇಧಿಸಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


