ಧಾರವಾಡ: ಮದುವೆ ಮನೆಯಲ್ಲಿ ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಧಾರವಾಡ(Dharwad)ದಲ್ಲಿ ನಡೆದಿದೆ. ಪೆಂಡಾರ್ ಗಲ್ಲಿಯ ಹಾಲ್ ನಲ್ಲಿ ಮದುವೆ ಸಮಾರಂಭಕ್ಕೆ ಹೋಗಿದ್ದ ಜಾಂಬವಂತನಗರ ನಿವಾಸಿ ಸಾಧಿಕ್ ಮೃತಪಟ್ಟವರು.
ಮದುವೆ ಮನೆಯಲ್ಲಿ ಇಬ್ಬರ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಜಗಳ ಬಿಡಿಲು ಸಾಧಿಕ್ ಹೋಗಿದ್ದಾನೆ. ಈ ವೇಳೆ ನಡೆದ ತಳ್ಳಾಟ-ನೂಕಾಟದಲ್ಲಿ ಸಿಲುಕಿದ್ದರಂತೆ ಸಾಧಿಕ್ ತಲೆಗೆ ಗೇಟ್ ಬಡಿದಿದೆ. ಪರಿಣಾಮ ಆತನ ತಲೆಗೆ ಗಂಭೀರ ಪೆಟ್ಟಿ ಬಿದ್ದು ಗಾಯಗೊಂಡಿದ್ದಾನೆ.ಗಂಭೀರವಾಗಿ ಗಾಯಗೊಂಡಿದ್ದ ಸಾಧಿಕ್‌ನನ್ನು ಸ್ಥಳೀಯರು ತಕ್ಷಣವೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ(Kims Hospital Hubli)ಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಆತ ಸಾವನ್ನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ರಿಜ್ವಾನ್ ಎಂಬಾತ ಸಾಧಿಕ್‌ನನ್ನು ತಳ್ಳಿದ್ದರಿಂದ ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು(Sahara Police Station) ಭೇಟಿ ನೀಡಿದ್ದು, ಆರೋಪಿ ರಿಜ್ವಾನ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


