ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಮೊದಲ ಬಾರಿಗೆ ಜಗನ್ ಜೀವನ್ ರಾಮ್ ಅವರ 115ನೇ ಜನ್ಮ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದಂತೆ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾ.
ಮಾಜಿ ಸಚಿವರಾದ ಡಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಚಿವರಾದ ಹೆಚ್.ಆಂಜನೇಯ ಮಾರ್ಗದರ್ಶನ ನೀಡಿದ್ದಾರೆ.
ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗಿದ್ದು, ರಾಜ್ಯಮಟ್ಟದ ಕಾಂಗ್ರೆಸ್ ನಾಯಕರು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಕಾಂಗ್ರೆಸ್ ನಾಯಕರ ಕಟೌಟ್ ಗಳು ರಾರಾಜಿಸುತ್ತಿವೆ.
ಇನ್ನೊಂದೆಡೆ ಕಾರ್ಯಕ್ರಮಕ್ಕೆ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆ ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕಾರಣ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಇನ್ನೂ ನಮ್ಮ ತುಮಕೂರು ಜೊತೆಗೆ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಮಾಜಿ ಜಿಲ್ಲಾ ಜಿಲ್ಲಾಧ್ಯಕ್ಷರಾದ ಶಶಿಕಲಾ ಸುರೇಶ್ ಬಾಬು ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಕೂಡ ಆಗಮಿಸಲಿದ್ದಾರೆ. ಈಗಾಗಲೇ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದಾರೆ ಎಂದು ತಿಳಿಸಿದರು.
ವರದಿ: ಮುರುಳಿಧರನ್ ಆರ್.ಹಿರಿಯೂರು ( ಚಿತ್ರದುರ್ಗ – ದಾವಣಗೆರೆ ) .
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5