ಶಿಲ್ಲಾಂಗ್: ಚರ್ಚ್ನೊಳಗೆ ಪ್ರವೇಶಿಸಿದ ವ್ಯಕ್ತಿಯೊಬ್ಬ ಜೈಶ್ರೀರಾಮ್ ಘೋಷಣೆ ಕೂಗಿದ ಘಟನೆ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಕಾಶ್ ಸಾಗರ್ ಎಂಬಾತ ಚರ್ಚ್ ಗೆ ನುಗ್ಗಿದ ವ್ಯಕ್ತಿಯಾಗಿದ್ದು, ಅಕ್ರಮವಾಗಿ ಚರ್ಚ್ ಗೆ ನುಗ್ಗಿದ ಈತ ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಲ್ಲದೇ ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿಯಲ್ಲಿ ಈತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಾವಿನ್ನಾಂಗ್ ಗ್ರಾಮದ ಚರ್ಚ್ ನಲ್ಲಿ ಈ ಘಟನೆ ನಡೆದಿದೆ. ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಅವರು ಈ ಘಟನೆಯನ್ನು ಖಂಡಿಸಿದ್ದಾರೆ. ಇದು ಉದ್ದೇಶಪೂರ್ವಕ ಕೃತ್ಯವಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರವು ಸಾಮಾಜಿಕ, ಧಾರ್ಮಿಕ ಅಥವಾ ಕೋಮು ಸಾಮರಸ್ಯ ಕದಡುವುದಕ್ಕೆ ಅವಕಾಶ ಮಾಡಿ ಕೊಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx