ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದು, ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ ಎಂದು ವರದಿ ತಿಳಿಸಿದೆ.
ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದೆ. ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಘಟನೆಯ ಬಳಿಕ ಡಿಸಿಪಿ ನೇತೃತ್ವದಲ್ಲಿ ಜೈಲಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಮಾರಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


