ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಪ್ರಜ್ವಲ್ ರೇವಣ್ಣರ SIT ತನಿಖೆ ಅಂತ್ಯವಾಗಿದ್ದು, ಮಾಜಿ ಸಂಸದರು ಜೈಲು ಪಾಲಾಗಿದ್ದಾರೆ.
ಪ್ರಜ್ವಲ್ ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿದೆ. ಇನ್ನು ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು.
ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್-5664 ನೀಡಲಾಗಿದೆ. ಇನ್ನು ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬಾರು, ಪಲ್ಯ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296