ಬರ್ಬರವಾಗಿ ಹತ್ಯೆಯಾದ ಬೆಳಗಾವಿ ಜಿಲ್ಲೆಯ ಜೈನಮುನಿ ಕಾಮಕುಮಾರನಂದಿ ಮಹಾರಾಜ ಅವರ ಪಾರ್ಥಿವ ಶರೀರವನ್ನು ತುಂಡು ತುಂಡು ಮಾಡಿ ಕೊಳವೆ ಬಾವಿಗೆ ಎಸೆಯಲಾಗಿತ್ತು. ಈ ಹೃದಯ ವಿದ್ರಾವಕ ಘಟನೆಯ ಬಗ್ಗೆ ಸೂಕ್ತ ತನಿಖೆಯಾಗಬೇಕು ಹಾಗೂ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕೆಂದು ವಿಧಾನಮಂಡಲದ ಅಧಿವೇಶನದಲ್ಲಿ ಸಚಿವರಾದ ಎಚ್.ಕೆ ಪಾಟೀಲ್ ಅವರಿಗೆ ವಿಧಾನಪರಿಷತ್ ಶಾಸಕರಾದ ಡಾ. ಟಿ. ಎ. ಶರವಣ ಅವರು ಮನವಿ ಮಾಡಿದರು.
ಗೌರವಯುತ ಸ್ಥಾನದಲ್ಲಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರಕರಣದ ಬಗ್ಗೆ ನಿರ್ಲಕ್ಷ್ಯದ ಹೇಳಿಕೆ ನೀಡಿ ಪ್ರಕರಣದ ದಿಕ್ಕು ತಪ್ಪಿಸಬಾರದು, ಈ ರೀತಿಯ ಹೇಳಿಕೆಯಿಂದ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಕೈ ಕಟ್ಟಿದಂತಾಗುತ್ತದೆ ಎಂದು ತಿಳಿಸಿದರು.
ಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೆ ನಿಷ್ಪಕ್ಷಪಾತವಾದ ತನಿಖೆ ನಡೆದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಈ ವೇಳೆ ಬತ್ತಾಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


