ತುಮಕೂರು: ಜೈನ್ ಪಿಯು ಕಾಲೇಜು, ತುಮಕೂರು ವತಿಯಿಂದ ಸತ್ಯಮಂಗಲದ ಜೆಜಿಐ ಹಾಲ್ ನಲ್ಲಿ ವಿಶೇಷ ಶಿಕ್ಷಣ ಮೇಳ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಶುಕ್ರವಾರ ಜರುಗಿತು.
10, 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ತಮ್ಮ ಯೋಗ್ಯತೆ, ವ್ಯಕ್ತಿತ್ವ ಮತ್ತು ಆಸಕ್ತಿಗಳ ಆಧಾರದ ಮೇಲೆ ಮಾಹಿತಿಯುಕ್ತ ವೃತ್ತಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಗತ್ಯವಾದ ಮಾರ್ಗದರ್ಶನ ನೀಡಲಾಯಿತು.
ಕಾರ್ಯಕ್ರಮದಲ್ಲಿ 12ನೇ ತರಗತಿಯ ನಂತರ ಲಭ್ಯವಿರುವ ಸಮಕಾಲೀನ ಹಾಗೂ ಹೊಸ ಯುಗದ ವೃತ್ತಿ ಆಯ್ಕೆಗಳು, 21ನೇ ಶತಮಾನದ ಕೌಶಲ್ಯಗಳು, ಕೌಶಲ್ಯ ಆಧಾರಿತ ಉದ್ಯೋಗಗಳು, ವೃತ್ತಿ ಮ್ಯಾಪಿಂಗ್, ಸೈಕೋಮೆಟ್ರಿಕ್ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಜೊತೆಗೆ CUET, CLAT, SAT, NDA, UCEED, JEE ಮುಂತಾದ ಪ್ರವೇಶ ಪರೀಕ್ಷೆಗಳನ್ನು ಭೇದಿಸಲು ಅಗತ್ಯ ಸಲಹೆ ಮತ್ತು ತಂತ್ರಗಳನ್ನೂ ಹಂಚಿಕೊಳ್ಳಲಾಯಿತು.
ಪ್ರಮುಖ ಭಾರತೀಯ ಹಾಗೂ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಹಾಗೂ ಅನುಭವಿ ವೃತ್ತಿ ಸಲಹೆಗಾರರು ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜೈನ್ ಪಿಯು ಕಾಲೇಜು ಪ್ರಾಂಶುಪಾಲರಾದ ಆರ್ .ವರುಣ್ ಕುಮಾರ್ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಸರಿಯಾದ ದಿಕ್ಕಿನಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಮಾರ್ಗದರ್ಶನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮೂರು ವಿಶ್ವವಿದ್ಯಾನಿಲಯಗಳಿಂದ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಪಿಯುಸಿ ನಂತರ ಮತ್ತು ಎಸ್ ಎಸ್ ಎಲ್ ಸಿ ನಂತರ ಯಾವ ಕೋರ್ಸ್ಗಳನ್ನು ಆಯ್ಕೆ ಮಾಡಬೇಕು ಎನ್ನುವುದರ ಕುರಿತು ವಿಶೇಷ ತರಬೇತಿ ನೀಡಲಾಗಿದೆ, ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸಿ, ತಮ್ಮ ಆಸಕ್ತಿ ಹಾಗೂ ಸಾಮರ್ಥ್ಯಗಳಿಗೆ ತಕ್ಕಂತೆ ವೃತ್ತಿ ಆಯ್ಕೆ ಮಾಡಲು ನೆರವಾಗುತ್ತವೆ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ತರಗತಿ ಪ್ರಕಾರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಸೆಷನ್ ಗಳನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 11 ಗಂಟೆಗೆ 12ನೇ ತರಗತಿ, ಮಧ್ಯಾಹ್ನ 12ಕ್ಕೆ 11ನೇ ತರಗತಿ ಮತ್ತು ಮಧ್ಯಾಹ್ನ 1 ಗಂಟೆಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನಡೆಯಿತು.
ಇದೇ ವೇಳೆಯಲ್ಲಿ ಉಪನ್ಯಾಸಕರಾದ ಟಿ.ಜಿ.ಹರೀಶ್ ಕುಮಾರ್, ರಾಮಚಂದ್ರಪ್ಪ, ಪ್ರಶಾಂತ್ ಲಿಗಂ, ಹರೀಶ್, ನಾಗಲಕ್ಷ್ಮಿ, ಕುಮಾರಿ ಭವ್ಯ, ನಂದಿನಿ, ಹೇಮಲತಾ, ಮೋಹನ್ ಕುಮಾರ್, ರಾಜಶೇಖರ್, ಹಾಗೂ ಪೋಷಕರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC