ಸರಗೂರು: ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಯ್ಯನ ಮುದ್ದಯನ ಹುಂಡಿಯಲ್ಲಿ ಕಾಮಗಾರಿಗಳನ್ನು ಪರಿಶೀಲಿಸಿ, ಈಗಾಗಲೇ ಮೀಟರ್ ಅಳವಡಿಸಿ ನಳ್ಳಿ ಸಂಪರ್ಕ ಪೂರ್ಣಗೊಂಡು ನೀರನ್ನು ಪೂರೈಸುತ್ತಿರುವ ಕಡೆ ಜನರಿಗೆ ಮೀಟರ್ ರೀಡಿಂಗ್ ಪ್ರಾರಂಭಿಸಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಅಣ್ಣೂರಿನ ಭುಕ್ತನ ಮಾಳ, ಬೀಚನಹಳ್ಳಿ ಅಂತರಸಂತೆ ಹೊನ್ನೂರು ಕುಪ್ಪೆ ಹಾಗೂ ಅಂತರಸಂತೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗನ್ನು ಪರಿಶೀಲಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.
ಬಳಿಕ ಸರಗೂರು ತಾಲ್ಲೂಕಿನ ಬಿದರಹಳ್ಳಿಯ ನಂಜನಾಥಪುರ ಹಾಗೂ ಬಿ.ಮಟಕೆರೆಯ ಕೂಡಗಿ ಹಾಡಿಗೆ ಸಹ ಭೇಟಿ ನೀಡಿ ಕಾಮಗಾರಿಗಳ ಪರಿವೀಕ್ಷಿಸಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಪ್ರತಿ ಮನೆಗೂ ನಲ್ಲಿ ಮೂಲಕ ಶುದ್ದ ಕುಡಿಯುವ ನೀರನ್ನು ಮನೆ ಮನೆ ಗಂಗೆ ಕಾರ್ಯಕ್ರಮದ ಮೂಲಕ ಪೂರೈಸಲಾಗುತ್ತಿದೆ ಎಂದರು.
ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಎ.ಎಸ್.ರಂಜಿತ್ ಕುಮಾರ್, ಹೆಚ್.ಡಿ.ಕೋಟೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗೋವಿಂದ ನಾಯಕ, ಕಿರಿಯ ಕಾರ್ಯಪಾಲಕ ಇಂಜಿನಿಯರ್ ಗಳಾದ ಮೋನಶ್ರೀ, ಕೆ.ಸುನೀಲ್, ನಾಗೇಶ್, ಮೋಹನ್ ರಾಜ್, ಜಲ ಜೀವನ್ ಮಿಷನ್ ಜಿಲ್ಲಾ ಸಮಾಲೋಕರಾದ ಚೇತನ್ ಕುಮಾರ್ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಿ ಭಾಗ್ಯ, ಗ್ರಾಪಂ ಅಧ್ಯಕ್ಷ ದೇವದಾಸ್, ಸದಸ್ಯರು ನಾಗೇಂದ್ರ, ಮಹೇಶ್ ಇದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


