ರಸ್ತೆ ಗುಂಡಿಯಲ್ಲಿ ಬಿದ್ದು ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದ್ದು, ಇದಕ್ಕೆ ಕಾರಣವೆನ್ನಲಾದ ಜಲಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದರು.
ಜೊತೆಗೆ ಬೆಸ್ಕಾಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧವೂ ಐದು ಪ್ರಕರಣ ದಾಖಲು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ಕಳೆದ ರಾತ್ರಿ ಎಂಎಸ್ ಪಾಳ್ಯದ ಮುನೇಶ್ವರ ಬಡಾವಣೆಯಲ್ಲಿ ಸಂಭವಿಸಿದ ದುರಂತದಲ್ಲಿ ಯುವಕ ಬಲಿಯಾಗಿದ್ದಾನೆ. ಇದಾಗ ಬಾರದಿತ್ತು. ಆದರೆ, ನಡೆದುಹೋಗಿದೆ. ಒಟ್ಟಿನಲ್ಲಿ ಜಲಮಂಡಳಿ ತಪ್ಪಿನಿಂದ ಇಂತಹ ಅನಾಹುತ ಆಗಿದೆ ಎಂದರು.ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಿಬಿಎಂಪಿಗೆ ಮಾಹಿತಿ ನೀಡದೆ ರಸ್ತೆ ಅಗೆದಿದ್ದರಿಂದ ಇಂತಹ ಅನಾಹುತ ಆಗಿದೆ. ಇನ್ನೂ, ಈಗಾಗಲೇ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇಂತಹ ಸಂಸ್ಥೆಗಳ ವಿರುದ್ಧ ಐದು ಪ್ರಕರಣ ದಾಖಲು ಮಾಡಲಾಗಿದೆ ಎಂದು ತಿಳಿಸಿದರು.
ಪರಿಹಾರ :
ಕಾನೂನಿನಲ್ಲಿ ಅವಶ್ಯಕತೆ ಇದ್ದರೆ ಪರಿಹಾರದ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಇಂದಿರಾ ಕ್ಯಾಂಟೀನ್ ನಡೆಸಲು ಸರ್ಕಾರದಿಂದ ಅನುದಾನ ಬಂದಿಲ್ಲ. ಬಿಬಿಎಂಪಿ ಬಜೆಟ್ ನ ಅನುದಾನ ಮೀಸಲಿಡುವ ಬಗ್ಗೆ ಚರ್ಚೆ ನಡೆದಿದೆ ಎಂದು ವಿವರಿಸಿದರು.
ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಅನುದಾನ ಮೀಸಲಿಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಯಾವ ಮಾದರಿಯಲ್ಲಿ ಕ್ಯಾಂಟೀನ್ ನಡೆಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕ್ಯಾಂಟೀನ್‍ನಲ್ಲಿ ಗುಣಮಟ್ಟ ಕಾಪಾಡಿಕೊಳ್ಳುವ ನಿಟ್ಟಿನಲ್ಲೂ ಚರ್ಚೆ ಆಗಿದ್ದು, ಮುಂದಿನ ದಿನಗಳಲ್ಲಿ ಆಹಾರದ ಗುಣಮಟ್ಟ ಕಾಪಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದರು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB