ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಇಂದು ತಾಲೂಕಿನ ಮಾಜಿ ಜೆಡಿಎಸ್ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ಜೆಡಿಎಸ್ ಪಕ್ಷದ ಜನತಾ ಜಲಧಾರೆ ರಥಯಾತ್ರೆ ಕುರಿತು ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು.
ಇದೇ ತಿಂಗಳು 25ನೇ ತಾರೀಕು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗಮಿಸಲಿದ್ದು, ತಾಲೂಕಿಗೆ ಜನತಾ ಜಲಧಾರೆ ರಥಯಾತ್ರೆ ಬರಲಿದ್ದು, ಪಕ್ಷಕ್ಕೆ ಹೊಸ ಮೆರುಗನ್ನು ಕೊಡುವ ನಿಟ್ಟಿನಲ್ಲಿ.ಜೊತೆಗೆ ಮುಂದಿನ ಚುನಾವಣೆಯಲ್ಲಿ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಕಾರ್ಯಕರ್ತರ ನಡುವೆ ಈ ಸಭೆಯನ್ನು ಮಾಡಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ, ಈ ಕಾರ್ಯಕ್ರಮಕ್ಕೆ ಸುಮಾರು 500 ಮುತ್ತೈದೆಯರು ಕುಂಭಮೇಳ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಅದ್ದೂರಿ ಯಶಸ್ವಿಗೊಳಿಸಬೇಕು. ಜೊತೆಗೆ ಕಾರ್ಯಕರ್ತರನ್ನು ಒಗ್ಗೂಡಿಸಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ರಮೇಶಗೌಡ, ಜೆಡಿಎಸ್ ಮುಖಂಡ ಚಂದ್ರೇಶ್, ಎಸ್ಸಿ ಘಟಕದ ಅಧ್ಯಕ್ಷ ತಿಮ್ಮೇಶ್, ಎಸ್ ಟಿ ಘಟಕದ ಅಧ್ಯಕ್ಷ ಶಿವಣ್ಣ ಇನ್ನು ನೂರಾರು ಕಾರ್ಯಕರ್ತರು ಈ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
ವರದಿ: ಸುರೇಶ್ ಬಾಬು ಎಂ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5