ತಿಪಟೂರು: ನಗರಕ್ಕೆ ಆಗಮಿಸಿದ ಜನತಾ ಜಲಧಾರೆ ಯಾತ್ರೆ ವಾಹನವನ್ನು ಜೆಡಿಎಸ್ ಮುಖಂಡರು ಗ್ರಾಮದೇವತೆ ಕೆಂಪಮ್ಮದೇವಿ ಸಮ್ಮುಖದಲ್ಲಿ ಬರಮಾಡಿಕೊಂಡು, ಪೂಜೆ ಸಲ್ಲಿಸಿದರು .
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜನಪ್ಪ ಮಾತನಾಡಿ, ಹೇಮಾವತಿ ಮತ್ತು ಎತ್ತಿನಹೊಳೆ ಯೋಜನೆ ಇದ್ದರೂ, ರೈತರಿಗೆ ಸಮರ್ಪಕವಾಗಿ ನೀರು ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಜಲಕ್ಷಾಮದಿಂದಾಗಿ ರೈತರು ಕೃಷಿ ಮಾಡಲು ಹಿಂದೇಟು ಹಾಕುವಂತಾಗಿದೆ . ರೈತರ ಬದುಕು ಹಸನು ಮಾಡಲು ಜೆಡಿಎಸ್ ಪಕ್ಷ ಜಲಧಾರೆ ಯೋಜನೆ ಯನ್ನು ಜಾರಿಗೆ ತಂದಿದೆ ಎಂದರು.
ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ಕಲಿಸಲು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದಲ್ಲಿ ತುಂಗಭದ್ರ ಕಬಿನಿ ಕೃಷ್ಣ ಕಾವೇರಿ ಪ್ರಮುಖ ನದಿಗಳು ಹುಟ್ಟಿ ಹರಿಯುತ್ತಿದ್ದರೂ, ನಮ್ಮ ಜನರಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ತಮಿಳುನಾಡು ಕೇರಳಕ್ಕೆ ಆಂಧ್ರಕ್ಕೆ ನಮ್ಮ ನೀರುಕೊಟ್ಟು ನಾವು ನೀರಿಗಾಗಿ ಹಾಹಾಕಾರ ಪಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ರೈತರ ಅಭಿವೃದ್ಧಿಯಾಗಬೇಕಾದರೆ, ಪ್ರಾದೇಶಿಕ ಪಕ್ಷ ಜೆಡಿಎಸ್ ನಿಂದ ಮಾತ್ರ ಸಾಧ್ಯ ಎಂದರು.
ಜೆಡಿಎಸ್ ಮುಖಂಡರಾದ ಜಕ್ಕನಹಳ್ಳಿ ಲಿಂಗರಾಜು ಮಾತನಾಡಿ, ನಾಡಿನ ಜಲ ನೆಲ ಉಳಿಯಬೇಕಾದರೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕು. ರಾಜ್ಯದ ನದಿಗಳಲ್ಲಿ ದೊರೆಯುವ ನೀರನ್ನು ಸದ್ಬಳಕೆ ಮಾಡಲು ಜೆಡಿಎಸ್ ಪಕ್ಷ ಕಟಿಬದ್ಧವಾಗಿದೆ ಎಂದರು.
ಜಲಧಾರೆಯ ವಾಹನವನ್ನು ಬರಮಾಡಿಕೊಂಡ ಜೆಡಿಎಸ್ ಕಾರ್ಯಕರ್ತರು ಗಳಾದ ಕಾರ್ಯಧ್ಯಕ್ಷ ಎಂ.ಎಸ್. ಶಿವಸ್ವಾಮಿ ಹುಣಸೇಘಟ್ಟ, ಪ್ರಕಾಶ್ ಹಿಂಡಿಸ್ಕೆರೆ, ಶಿವಶಂಕರ್ ರೇಖ ಅನುಪ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಧಾ ನಾರಾಯಣಗೌಡ ತಡಸೂರು ಗುರುಮೂರ್ತಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು .ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮುಂದಿನ ಊರಿಗೆ ಕಳುಹಿಸಿಕೊಟ್ಟರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5