ಕೊರಟಗೆರೆ: ತಾಲೂಕು ಹಾಗೂ ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಗರ್ ಹುಕ್ಕುಂ ಸಮಿತಿ ಸಭೆಯನ್ನು ರದ್ದು ಪಡಿಸಲಾಗಿದೆ.
ಬಗರ್ ಹುಕ್ಕುಂ ಸಮಿತಿ ಸಭೆಯನ್ನು ರದ್ದುಪಡಿಸಿದ ಶಾಸಕ ಡಾ ಜಿ ಪರಮೇಶ್ವರ್, ಭಾರೀ ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಣ ಭೀಕರ ಮಳೆಗೆ ಚನ್ನಸಾಗರ ಗ್ರಾಮಕ್ಕೆ ನೀರು ನುಗ್ಗಿ ಜನ ತತ್ತರಿಸಿದ್ದರು. ಆ ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಡಾ. ಜಿ ಪರಮೇಶ್ವರ್ ಭೇಟಿ ನೀಡಿ, ಸ್ಥಳ ಪರಿಶೀಲಿಸಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಕುಟುಂಬಗಳಿಗೆ ಇಂದು ಸಂಜೆಯೊಳಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಿದರು.
ಮನೆಗಳಿಗೆ ನೀರು ನುಗ್ಗಿದ ಪರಿಣಾಮ ದವಸ ಧಾನ್ಯ ಹಾನಿಯಾಗಿ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾದ ಕಾರಣ ಸೂಕ್ತ ಪರಿಹಾರ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿಯೇ ಅಧಿಕಾರಿಗಳಿಗೆ ಪರಮೇಶ್ವರ್ ಸೂಚನೆ ನೀಡಿದರು.
ವರದಿ: ಮಂಜುಸ್ವಾಮಿ.ಎಂ.ಎನ್ ., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy