nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಲಜೀವನ್ ಮಿಷನ್ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ:  ಸಂಸದ ಕೋಟಾ ಶ್ರೀನಿವಾಸ ಪೂಜಾರಿ
    ಜಿಲ್ಲಾ ಸುದ್ದಿ November 30, 2024

    ಜಲಜೀವನ್ ಮಿಷನ್ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ:  ಸಂಸದ ಕೋಟಾ ಶ್ರೀನಿವಾಸ ಪೂಜಾರಿ

    By adminNovember 30, 2024No Comments2 Mins Read
    kota srinivas poojary

    ಚಿಕ್ಕಮಗಳೂರು: ಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿ. ಶೀಘ್ರವಾಗಿ ಸಾರ್ವಜನಿಕರಿಗೆ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವ್ಯಾಪ್ತಿಯ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.

    ಕೇಂದ್ರ ಸರ್ಕಾರವು ಹರ್ ಘರ್ ಜಲ್ ಎಂಬ ಘೋಷಣೆಯೊಂದಿಗೆ ದೇಶದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೆ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತ ಹಾಗೂ ಸಮರ್ಪಕ  ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ ನೀರಿನ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯ ಕಾಮಗಾರಿಯನ್ನು ಪ್ರದೇಶಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಯೋಜನೆ ಸಿದ್ದಪಡಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರತಿಯೊಂದು ಮನೆಗೆ ನೀರು ಒದಗಿಸಲು ಕ್ರಮವಹಿಸಿ ಎಂದು ತಿಳಿಸಿದರು.

    ಕಾಮಗಾರಿಗೆ ಬಳಸುವ ಪೈಪ್, ಟ್ಯಾಪ್, ಮೀಟರ್‌ಗಳು ಹಾಗೂ ಇನ್ನಿತರ ವಸ್ತುಗಳ ಗುಣಮಟ್ಟವನ್ನು ಪರಿಶೀಲಿಸಿ ನಂತರ ಅಳವಡಿಸಬೇಕು. ಕಾಮಗಾರಿ ಸಂಬಂಧ ರಸ್ತೆಗಳನ್ನು ಕತ್ತರಿಸುವ ಸಂದರ್ಭವಿದ್ದಲ್ಲಿ ಬ್ಲೇಡ್ ಮೂಲಕ ಕತ್ತರಿಸಿ ರಸ್ತೆಗಳಿಗೆ ಯಾವುದೇ ಹಾನಿಯಾಗದಂತೆ ಗಮನಹರಿಸಬೇಕು. ಪ್ರಥಮವಾಗಿ ಗ್ರಾಮದಲ್ಲಿ ನೀರಿನ ಮೂಲಗಳನ್ನು ಗುರುತಿಸಿ ನಂತರ ಕಾಮಗಾರಿಯನ್ನು ಪ್ರಾರಂಭಿಸಬೇಕು. ಕಾಮಗಾರಿ ಪೂರ್ಣಗೊಂಡ ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಬೇಕು ಹಾಗೂ ಕಳಪೆ ಕಾಮಗಾರಿ ನಿರ್ವಹಿಸುವ ಕಂಟ್ರಾಕ್ಟರ್ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದ ಅವರು  ಜನರಿಗೆ ಶುದ್ಧ ನೀರನ್ನು ಒದಗಿಸಲು ಕ್ರಮವಹಿಸಿ ಎಂದರು.

    ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್ ಕೀರ್ತನಾ ಮಾತನಾಡಿ ಜಿಲ್ಲೆಯ ೨೨೬ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ೧೦೦೬ ಗ್ರಾಮಗಳಿವೆ ಇವುಗಳಲ್ಲಿ ಸುಮಾರು ೩,೭೨೯ ಜನವಸತಿಯಿದ್ದು ಒಟ್ಟು ೨,೪೦,೩೦೭ ಕುಟುಂಬಗಳಿವೆ. ಇವುಗಳಲ್ಲಿ ೬೬,೪೦೩ ವೈಯಕ್ತಿಕ ನಳ ಸಂಪರ್ಕ ಹೊಂದಿದ್ದ ಕುಟುಂಬಗಳಿದ್ದು ಈವರೆಗೆ ೧,೨೯,೫೪೯ ಕುಟುಂಬಗಳಿಗೆ ಸಂಪರ್ಕ ಕಲ್ಪಿಸಲಾಗಿದೆ ಹಾಗೂ ೪೪,೩೫೫ ಕುಟುಂಬಗಳಿಗೆ ಯೋಜನೆಯಡಿಯಲ್ಲಿ ಶೀಘ್ರವಾಗಿ ವೈಯಕ್ತಿಕ ನಳ ಸಂಪರ್ಕ ಕಲ್ಪಿಸಿಕೊಡಲಾಗುವುದು ಎಂದರು.

    ಜಿಲ್ಲಾದ್ಯಂತ ಬ್ಯಾಚ್–೧ ರಲ್ಲಿ ೨೫೧ ಕಾಮಗಾರಿಗಳಿಗೆ ಅನುಮೋದನೆಗೊಂಡಿದ್ದು, ಇವುಗಳಲ್ಲಿ ೨೩೬ ಪೂರ್ಣಗೊಂಡಿದೆ ಹಾಗೂ ೧೫ ಕಾಮಗಾರಿಗಳು ಪ್ರಗತಿಯಲ್ಲಿವೆ. ಬ್ಯಾಚ್–೨ ರಲ್ಲಿ ೨೭೫ ಕಾಮಗಾರಿಗಳಲ್ಲಿ ೧೮೨ ಕಾಮಗಾರಿಗಳು ಪೂರ್ಣಗೊಂಡಿವೆ ಮತ್ತು ೯೩ ಕಾಮಗಾರಿಗಳು ಪ್ರತಿಯಲ್ಲಿದೆ. ಬ್ಯಾಚ್–೩ ರಲ್ಲಿ ೧೨೯ ಕಾಮಗಾರಿಗಳಿಗೆ ಅನುಮೋದನೆಯಾಗಿದ್ದು, ಇವುಗಳಲ್ಲಿ ೧೦೬ ಕಾಮಗಾರಿಗಳು ಪೂರ್ಣಗೊಂಡಿವೆ ಹಾಗೂ ೨೩ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ ಮತ್ತು ಬ್ಯಾಚ್-೪ ರಲ್ಲಿ ಒಟ್ಟು ೧೧೩೦ ಕಾಮಗಾರಿಗಳಿಗೆ ಅನುಮೋದನೆ ಪಡೆದಿದ್ದು, ೩೨೨ ಕಾಮಗಾರಿಗಳು ಪೂರ್ಣಗೊಂಡಿವೆ. ಇನ್ನು ೫೮೭ ಕಾಮಗಾರಿಗಳು ಪ್ರಗತಿಯಲ್ಲಿದೆ. ಜಿಲ್ಲೆಯಾದ್ಯಂತ ಪ್ರಗತಿಯಲ್ಲಿರುವ ಒಟ್ಟು ೭೧೮  ಜಲಜೀವನ್ ಮಿಷನ್ ಕಾಮಗಾರಿಗಳನ್ನು ಹಂತ ಹಂತವಾಗಿ ಶೀಘ್ರದಲ್ಲೆ ಪೂರ್ಣಗೊಳಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದ ಅವರು ರಸ್ತೆಯನ್ನು ಬ್ಲೇಡ್ ಮೂಲಕ ಕತ್ತರಿಸಿ ನಂತರ ಅವುಗಳನ್ನು ದುರಸ್ತಿಗೊಳಿಸಲಾಗುತ್ತಿದೆ ಹಾಗೂ ಕಾಮಗಾರಿಯನ್ನು ವೈಜ್ಞಾನಿಕ ಮತ್ತು ವ್ಯವಸ್ಥಿತವಾಗಿ ಗುಣಮಟ್ಟದಿಂದ ಪೂರ್ಣಗೊಳಿಸಲಾಗುತ್ತಿದೆ ಎಂದರು.

    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಖಾರಿ, ಶಿವಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಚಿದಾನಂದ ಹಾಗೂ  ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ…

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.