ಸರಗೂರು: ಹುಲಿ ಬಂತು, ಹುಲಿ… ಹೌದು..! ಸರಗೂರು ತಾಲೂಕಿನ ಹೆಚ್.ಬಿ. ಮಟಗೆರೆ ಗ್ರಾಮದಲ್ಲಿ ಹುಲಿಯನ್ನು ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದ ಘಟನೆ ನಡೆದಿದ್ದು, ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ಹೆಚ್.ಬಿ.ಮಟಗೆರೆ ಗ್ರಾಮದ ಹೊರವಲಯದಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ರೈತರು ಹೇಳಿದ್ದಾರೆ. ವಿಚಾರ ತಿಳಿದು ಅರಣ್ಯ ಇಲಾಖೆಯ ಸಿಬ್ಬಂದಿ, ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿದ್ದು, ರೈತರು ಹೇಳಿದ ಜಾಗದಲ್ಲಿ ಹುಲಿ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಹುಲಿ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದು, ಕೃಷಿ ಚಟುವಟಿಕೆಗಳಿಗೆ ಜಮೀನಿಗೆ ಹೋಗಲು ಭೀತಿ ಸೃಷ್ಟಿಯಾಗಿದೆ ಎಂದು ದೂರಿದ್ದಾರೆ. ಹೀಗಾಗಿ ತಕ್ಷಣವೇ ಹುಲಿಗೆ ಬೋನಿಟ್ಟು ಹಿಡಿದು, ಭಯಮುಕ್ತ ವಾತಾವರಣ ಸೃಷ್ಟಿಸಬೇಕು ಎಂದು ಇಲ್ಲಿನ ರೈತರು ಮನವಿ ಮಾಡಿಕೊಂಡಿದ್ದಾರೆ.
ವರದಿ: ಚಂದ್ರ ಹಾದನೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700