ತುಮಕೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಬಳಿಕ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಸಚಿವರು ಬಳಿಕ ವಿಶೇಷ ಪೂಜೆ ಸಲ್ಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಂತ್ರಿ ಆದಾಗೆಲ್ಲ ಸಿದ್ದಗಂಗಾ ಮಠಕ್ಕೆ ಬಂದು ನಾನು ಆಶೀರ್ವಾದ ಪಡೆಯುತ್ತೇನೆ. ಇಂದು ಕೂಡ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಓದಿಗೆ ಕಟ್ಟಡದ ಕೊರತೆಯಿದೆ. ಕೊರತೆ ಬಗ್ಗೆ ಶ್ರೀಗಳು ನನ್ನ ಗಮನಕ್ಕೆ ತಂದಿದ್ದಾರೆ.
ಸರ್ಕಾರ ಸಿದ್ದಗಂಗಾ ಮಠದ ಅನುದಾನ ತಡೆ ಹಿಡಿದಿರುವ ಬಗ್ಗೆ ನಾನು ಸಿಎಂ ಗಮನಕ್ಕೆ ತರುತ್ತೇನೆ ಎಂದರು.ಅನುದಾನ ಮಂಜೂರು ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಐದು ಗ್ಯಾರಂಟಿಗಳು ಅನುಷ್ಠಾನ ಆಗೇ ಆಗುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


