ಬಾಗಲಕೋಟೆ: ಜಮೀನು ವಿಚಾರವಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಬನಹಟ್ಟಿ ಕೆರೆ ಬಡಾವಣೆಯಲ್ಲಿ ನಡೆದಿದೆ.
65 ವರ್ಷದ ಮಾಳಪ್ಪ ಹಳ್ಳೂರ ಮೃತ ದುರ್ದೈವಿ. ಎರಡು ಗುಂಟೆ ಜಾಗಕ್ಕಾಗಿ ತಂದೆ ಮಾಳಪ್ಪ ಅವರನ್ನು ಮಗನಾದ ತುಕ್ಕಪ್ಪ ಶೆಡ್ ಮನೆಯಲ್ಲಿ ಕಟ್ಟಿಗೆಯಿಂದ ತಲೆಗೆ ಹೊಡೆದು ಹತ್ಯೆಗೈದಿದ್ದಾನೆ.
ನಿನ್ನೆ ರಾತ್ರಿ 2.30ರ ಸುಮಾರಿಗೆ ಘಟನೆ ನಡೆದಿದ್ದು, ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy