ಕನ್ನಡ ಚಿತ್ರರಂಗದ ಖ್ಯಾತ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿನ್ನೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪವಿತ್ರ ರಂಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು, ಆತಿಥ್ಯ ಸ್ವೀಕರಿಸಿ ಶುಭ ಹಾರೈಸಿದರು.
ನಿರಂತರ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿ, ಆತಿಥ್ಯ ಸ್ವೀಕರಿಸಿದ್ದಕ್ಕಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇತರ ಅತಿಥಿಗಳಿಗೆ ಧನ್ಯವಾದ ತಿಳಿಸಿದರು.
ಈ ವೇಳೆ ನಟ ವಿನೋದ್ ಪ್ರಭಾಕರ್, ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್, ಮುಖಂಡರಾದ ಇಮ್ತಿಯಾಜ್ ಫಾರುಖ್ ಖಾನ್, ಜಿ.ಎ ಬಾವಾ, ಅಲ್ತಾಫ್ ಖಾನ್, ಶೋಯೆಬ್ ಖಾನ್ ಉಪಸ್ಥಿತರಿದ್ದರು.
ವರದಿ ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


