ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಆಲಗೂರು ಗ್ರಾಮದ ಬಳಿ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಮಹಾಂತೇಶ್ ಹೊನಕಟ್ಟಿ (35), ಬೆಳಗಾವಿ ಜಿಲ್ಲೆಯ ಅರಬಾವಿ ನಿವಾಸಿ ಭೀಮಪ್ಪ ಗಂಟೆಣ್ಣವರ (42), ಜಮಖಂಡಿ ತಾಲ್ಲೂಕಿನ ಜಂಬಗಿ ಬಿಕೆ ಗ್ರಾಮದ ನಿವಾಸಿ ಆನಂದ ಬಾಡಗಿ (22) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಇಂದು ನಸುಕಿನ ಜಾವ ಜಮಖಂಡಿಯಿಂದ ವಿಜಯಪುರಕ್ಕೆ ಟಾಟಾ ಏಸ್ ವಾಹನ ಹೊರಟಿತ್ತು. ಕಾರು ವಿಜಯಪುರದಿಂದ ಜಮಖಂಡಿಗೆ ಬರುತ್ತಿತ್ತು. ಕಾರು ಹಾಗೂ ಟಾಟಾ ಏಸ್ ವಾಹನ ಪರಸ್ಪರ ಡಿಕ್ಕಿಯಾಗಿವೆ. ಟಾಟಾ ಏಸ್ ವಾಹನಕ್ಕೆ ಹಿಂಬದಿಯಿದ್ದ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಜಮಖಂಡಿ ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್ ಐ ಗಂಗಾಧರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4