ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಎನ್‌ಕೌಂಟರ್. ಮೂವರು ಲಷ್ಕರ್ ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಈ ಪ್ರದೇಶದಲ್ಲಿ ಇನ್ನಷ್ಟು ಉಗ್ರರು ಅಡಗಿಕೊಂಡಿದ್ದಾರೆ ಎಂದು ಭದ್ರತಾ ಪಡೆಗಳು ಹೇಳಿವೆ. ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಯುತ್ತಿದೆ.
ಮುಂಜೆ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಇಂದು ಬೆಳಗ್ಗೆ ಎನ್‌ಕೌಂಟರ್ ನಡೆದಿದೆ. ಎನ್‌ಕೌಂಟರ್ ಸ್ಥಳದಿಂದ ಒಂದು ರೈಫಲ್ ಮತ್ತು ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy