ತುಮಕೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾವಿ ಗ್ರಾಮ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಜನವರಿ 23ರಂದು ಬೆಳಿಗ್ಗೆ 10:30 ಗಂಟೆಗೆ ಬೆಳ್ಳಾವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಅಸಾಂಕ್ರಾಮಿಕ ಕಾಯಿಲೆಗಳ ತಪಾಸಣೆ ಮತ್ತು ಋತುಬಂಧ ಕುರಿತು ಜನಜಾಗೃತಿ ಕಾರ್ಯಕ್ರಮ”ವನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಬಿ.ಎಮ್. ಕಾರ್ಯಕ್ರಮವನ್ನು ಉದ್ಘಾಟಿಸುವರು. ಬೆಳ್ಳಾವಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಲ್ಲಿಕಾರ್ಜುನ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಆರೋಗ್ಯ ಶಿಕ್ಷಣ, ಮಧುಮೇಹ, ರಕ್ತದೊತ್ತಡ, ಋತುಬಂಧ ಕುರಿತು ಮಾಹಿತಿ ನೀಡಲಾಗುವುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx