ನವದೆಹಲಿ: ಕೊವಿಡ್ ವೈರಸ್ ಜಾಗತಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ತನ್ನ ಜನ ಆಕ್ರೋಶ್ ಯಾತ್ರೆ ಅನ್ನು ಸ್ಥಗಿತಗೊಳಿಸಿದೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಗುರುವಾರ ಈ ಬಗ್ಗೆ ತಿಳಿಸಿದ್ದು, ಕೋವಿಡ್19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಜನ ಆಕ್ರೋಶ ಯಾತ್ರೆಯನ್ನು ಸ್ಥಗಿತಗೊಳಿಸಿದೆ. ಬಿಜೆಪಿಗೆ ರಾಜಕೀಯಕ್ಕಿಂತ ಮೊದಲು ಜನ ಬರುತ್ತಾರೆ. ನಮಗೆ ಜನರ ಸುರಕ್ಷತೆ, ಅವರ ಆರೋಗ್ಯವು ಆದ್ಯತೆಯಾಗಿದೆ ಎಂದಿದ್ದಾರೆ.
ಕಾಂಗ್ರೆಸ್ನ ಭಾರತ್ ಜೋಡೋ ಯಾತ್ರೆಯನ್ನು ಬೆಳಿಗ್ಗೆ ಮತ್ತು ಸಂಜೆಯ ನಡಿಗೆ ಎಂದು ಬಣ್ಣಿಸಿದ ಸಿಂಗ್, ಪಕ್ಷವು ರಾಜಕೀಯಕ್ಕಾಗಿ ಜನರ ಜೀವನದ ಜೊತೆ ಆಟವಾಡುತ್ತಿದೆ ಎಂದು ಇದೇ ವೇಳೆ ಆರೋಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy