ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ, ಕಾನೂನು ಸುವ್ಯವಸ್ಥೆ ಕುಸಿತ, ಹೆಚ್ಚುತ್ತಿ ರುವ ದೌರ್ಜನ್ಯ ಪ್ರಕರಣ ಸೇರಿದಂತೆ ಆಡಳಿತ ವೈಫಲ್ಯದ ವಿರುದ್ಧ ನಾಳೆಯಿಂದ ಜನಾಕ್ರೋಶ ಯಾತ್ರೆಗೆ ಚಾಲನೆ ದೊರಕಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿಯ 45ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನದಿಂದ ಹೋರಾಟವನ್ನು ಪ್ರಾರಂಭಿಸಲಾಗುವುದು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಈ ಹೋರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಬೆಲೆ ಏರಿಕೆ ಮಾಡಲಾಗುತ್ತಿದೆ. ನಾವು ಕಾಂಗ್ರೆಸ್ ಸರ್ಕಾರದ ವಿರುದ್ಧ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಹೋರಾಟ ಮಾಡುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವವರೆಗೂ ಸುಮನಿರುವುದಿಲ್ಲ ಎಂದು ಅವರು ಗುಡುಗಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW