ಕೊರಟಗೆರೆ : ಜನನ ಮತ್ತು ಮರಣ ನೊಂದಣಿ ಕಾಯಿದೆಯನ್ನು ತಿದ್ದುಪಡಿಗೊಳಿಸಿ ಜೆ.ಎಂ.ಎಫ್.ಸಿ ಮತ್ತು ಸಿವಿಲ್ ನ್ಯಾಯಾಲಯದ ಬದಲು ಎ.ಸಿ. ನ್ಯಾಯಾಲಯದ ವ್ಯಾಪ್ತಿಗೆ ಬರುವಂತೆ ಸರ್ಕಾರವು ಆದೇಶಿಸಿರುವುದನ್ನು ಖಂಡಿಸಿ ಕೊರಟಗೆರೆ ತಾಲ್ಲೂಕು ವಕೀಲರ ಸಂಘ ತಹಶೀಲ್ದಾರ್ ರವರಿಗೆ ಮನವಿ ನೀಡಿದರು.
ಜನನ ಮತ್ತು ಮರಣ ನೋಂದಣಿ ತಿದ್ದುಪಡಿ ಕಾಯ್ದೆ 2022 ಅನ್ನು ದಿನಾಂಕ 18/07/2022 ರಂದು ಕರ್ನಾಟಕ ರಾಜ್ಯ ಸರ್ಕಾರವು ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ವ್ಯಾಪ್ತಿಯ ಬದಲು ಉಪ ವಿಭಾಗಾಧಿಕಾರಿಗಳ ವ್ಯಾಪ್ತಿಗೆ ಬರುವಂತೆ ಆದೇಶಿಸಿದ್ದು, ಈ ಆದೇಶದಿಂದ ಜನಸಾಮಾನ್ಯರಿಗೆ, ಕಕ್ಷಿದಾರರಿಗೆ, ವಕೀಲರುಗಳಿಗೆ ಜನನ ಮತ್ತು ಮರಣ ದೃಢೀಕರಣ ಪತ್ರ ಪಡೆಯುವಲ್ಲಿ ಸಾಕಷ್ಟು ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಲಾಗಿದೆ.
ಸರ್ಕಾರವು ಏಕಾಏಕಿ ತೀರ್ಮಾನ ತೆಗೆದುಕೊಂಡು ಆದೇಶಿಸಿರುವುದು ಸೂಕ್ತವಲ್ಲ. ಈ ಆದೇಶವನ್ನು ರದ್ದುಪಡಿಸಿ, ಯಥಾಸ್ಥಿತಿ ಜನನ ಮತ್ತು ಮರಣ ದೃಢೀಕರಣ ಕಾಯ್ದೆ 1969ರಂತೆ ತಂದು ಸಾರ್ವಜನಿಕರ ಹಿತಾಸಕ್ತಿ ಕಾಪಾಡಬೇಕು ಎಂದು ಒತ್ತಾಯಿಸಿ, ತಹಶೀಲ್ದಾರ್ ನಹೀದ ಜಂ ಜಂ ಅವರಿಗೆ ಮನವಿ ಸಲ್ಲಿಸಿದರು.
ವರದಿ: ಮಂಜುಸ್ವಾಮಿ.ಎಂ.ಎನ್ ., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz