ನಾನು ಮೂರನೇ ಬಾರಿ ಶಾಸಕನಾಗಿ ಆಯ್ಕೆ ಮಾಡಿರುವ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕಿದೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬಂತೆ ನಾನು ಶಾಸಕರ ನಡೆ ಜನರ ಮನೆಯ ಬಾಗಿಲಿಗೆ ಎಂಬ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದೇನೆ ಎಂದು ತಿಪಟೂರು ಶಾಸಕ ಕೆ.ಷಡಕ್ಷರಿ ಹೇಳಿದರು.
ತಿಪಟೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸದೆ ನಿರ್ಲಕ್ಷ್ಯತನವನ್ನು ಬದಿಗಿಟ್ಟು ಕೆಲಸ ಮಾಡಬೇಕಾಗಿದೆ ಎಂದು ಕಿವಿಮಾತು ಹೇಳಿದರು.
ಎರಡು ಬಾರಿಶಾಸಕನಾಗಿ ಉತ್ತಮ ಆಡಳಿತ ನೀಡಿರುವ ನನಗೆ ಮತ್ತೊಂದು ಬಾರಿ ಜನತೆ ಆಶೀರ್ವದಿಸಿದ್ದಾರೆ. ಜನರ ಮನೆ ಬಾಗಿಲಿಗೆ ಆಡಳಿತ ನೀಡಬೇಕೆಂಬುದು ಕನಸು ಕಂಡಿರುವ ನನಗೆ, ನಿಮ್ಮೆಲ್ಲರ ಸಹಕಾರ ಬೇಕಿದೆ. ಸಾರ್ವಜನಿಕರು , ರೈತರು ತಮ್ಮ ಕೆಲಸ ಕಾರ್ಯಗಳಿಗೆ ಅಧಿಕಾರಿಗಳ ಬಳಿ ಬಂದಾಗ ಅವರದೊಂದಿಗೆ ಸೌಜನ್ಯದಿಂದ ವರ್ತಿಸಿ ಎಂದ ಅವರು, ಸಾರ್ವಜನಿಕರ ದೂರು ದೂರುಗಳು ಬಂದರೆ ನಾನು ಸುಮ್ಮನೆ ಇರುವ ವ್ಯಕ್ತಿಯಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ತಹಶೀಲ್ದಾರ್ ಪವನ್ ಕುಮಾರ್ ತಾಲೂಕು ಪಂಚಾಯಿತಿ ಇ.ಒ. ಸುದರ್ಶನ್ ಹಾಗೂ ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಭದ್ ರಗಡ, ಮತ್ತಿತ್ತರು ಭಾಗವಹಿಸಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA