ಜನರಿಗೆ ಕಾಂಗ್ರೆಸ್ ನೀಡುತ್ತಿರುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು.
ಮಡಿಕೇರಿಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಾಲೆಗೆ ತೆರಳುವ ಹೆಣ್ಣುಮಕ್ಕಳಿಗಾಗಿ ಉಚಿತ ಬಸ್ ಪಾಸ್ ಒದಗಿಸಲಾಗುತ್ತಿದೆ. 8 ಲಕ್ಷ ವಿದ್ಯಾರ್ಥಿನಿಯರಿಗೆ ಇದರಿಂದ ಲಾಭವಾಗಿದೆ. ಸಾಮಾಜಿಕ ನ್ಯಾಯ ಹೆಚ್ಚಿಸಲು ಕ್ರಮಕೈಗೊಳ್ಳಲಾಗಿದೆ. ಹಾಗಾಗಿ ಜೇನು ಗೂಡಿಗೆ ಕೈ ಹಾಕುವ ಕೆಲಸಮಾಡಿದ್ದೇನೆ. ಬರೇ ಭಾಷಣದಲ್ಲಿ ಸಾಮಾಜಿಕನ್ಯಾಯ ಸಾಧ್ಯವಿಲ್ಲ. ಕೆಲವರನ್ನ ಕೆಲವು ಸಮಯ ಮೋಸ ಮಾಡಬಹುದು. ಆದರೆ ಜನರನ್ನ ಎಲ್ಲಾ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ಗೆ ಅಧಿಕಾರವಿದ್ದಾಗ ಯಾಕೆ ಸೌಲಭ್ಯ ನೀಡಲಿಲ್ಲ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಲೇವಡಿ ಮಾಡಿದರು.
ಯಡಿಯೂರಪ್ಪ ಅವರು ನಿಜವಾದ ಸಾಮಾಜಿಕ ನ್ಯಾಯ ಕೊಟ್ಟವರಾಗಿದ್ದಾರೆ. ಭಾಗ್ಯ ಲಕ್ಷ್ಮೀ ಯೋಜನೆ, ಕಾಗಿನೆಲೆ ಅಭಿವೃದ್ಧಿ, ತಾಂಡಾ ಅಭಿವೃದ್ಧಿ ನಿಗಮ ಮಾಡಿದ್ದು ಯಡಿಯೂರಪ್ಪನವರು ಎಂದು ಸಿಎಂ ಬೊಮ್ಮಾಯಿ ಯಡಿಯೂರಪ್ಪ ಅವರ ಸಾಧನೆಗಳನ್ನು ಗುಣಗಾನ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


