ಹೊಸ ರಾಜಕೀಯ ಪಕ್ಷ ಘೋಷಿಸಿ ಆಡಳಿತ ಪಕ್ಷ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ ಮಾಡಲು ಅನುಮತಿ ನೀಡಿದೆ.
ಜನಾರ್ದನ ರೆಡ್ಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡ ಗೃಹ ಇಲಾಖೆ, ಸಿಬಿಐಗೆ ಅನುಮತಿ ನೀಡಿ ಆದೇಶ ನೀಡಿದೆ.
ಈ ಬಗ್ಗೆ ಹೈಕೋರ್ಟ್ ಗೆ ಮಾಹಿತಿ ನೀಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಈಗಾಗಲೇ ಆದೇಶ ನೀಡಿದೆ. ಗೃಹ ಇಲಾಖೆಯಿಂದ ಸಿಬಿಐಗೆ ಅನುಮತಿ ನೀಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


