ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟುಹಬ್ಬ ಅಮೃತ ಮಹೋತ್ಸವವನ್ನು ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.
ಇತ್ತ ಸಿದ್ದರಾಮಯ್ಯನವರ ತವರೂರು ಮೈಸೂರು ತಾಲೂಕಿನ ಸಿದ್ದರಾಮನ ಹುಂಡಿ ಜನರಿಲ್ಲದೆ ಬಣಗುಡುತ್ತಿದೆ. ಇಲ್ಲಿನ ಬಹುತೇಕರು ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ್ದು, ಕಾಲು ನೋವಿನ ಕಾರಣಕ್ಕೆ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ಸಿದ್ದರಾಮನ ಹುಂಡಿಯಲ್ಲಿ ಉಳಿದುಕೊಂಡಿದ್ದಾರೆ.
ಇನ್ನುಳಿದಂತೆ ಎಲ್ಲರೂ ಸಹ ದಾವಣಗೆರೆಗೆ ತೆರಳಿದ್ದಾರೆ. ತವರು ಗ್ರಾಮದ ಜನತೆಗಾಗಿ ದಾವಣಗೆರೆಯಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


