ವಸತಿ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಗಳ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಜಿಲ್ಲಾಮಟ್ಟದಲ್ಲಿ ಜನತಾ ದರ್ಶನ ಆರಂಭಿಸಲಾಗುವುದು ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿ ಗುರುವಾರ ಮಾತನಾಡಿದ ಅವರು, ‘ಮೊದಲ ಜನತಾ ದರ್ಶನ ಆಗಸ್ಟ್ 1ರಂದು ನಡೆಯಲಿದೆ. ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಎರಡು ದಿನ ಜನತಾ ದರ್ಶನ ನಡೆಸಲಿದ್ದೇನೆ. ಜಿಲ್ಲೆ ವ್ಯಾಪ್ತಿಯ ಎರಡೂ ಇಲಾಖೆಗಳ ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರಲಿದ್ದಾರೆ’ ಎಂದು ಮಾಹಿತಿ ನೀಡಿದರು. ಆಗಸ್ಟ್ ಒಳಗೆ ಎರಡೂ ಇಲಾಖೆಗಳಲ್ಲಿ ಸಮಸ್ಯೆ ಇದ್ದರೆ ಪರಿಹರಿಸಿಕೊಳ್ಳಲು ಅಧಿಕಾರಿಗಳಿಗೆ ಗಡುವು ನೀಡಿದ್ದೇನೆ.ಜನತಾ ದರ್ಶನ ಸಂದರ್ಭದಲ್ಲಿ ಏನಾದರೂ ಸಮಸ್ಯೆ ಕಂಡು ಬಂದರೆ ಅಥವಾ ಅಧಿಕಾರಿಗಳ ಮಟ್ಟದಲ್ಲಿ ತಪ್ಪು ನಡೆದಿದ್ದರೆ ಸ್ಥಳದಲ್ಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.
ಬೆಂಗಳೂರಿನ 25 ಸೇರಿದಂತೆ ರಾಜ್ಯದಲ್ಲಿ ಹೊಸದಾಗಿ ಘೋಷಿಸಿರುವ 154 ಕೊಳೆಗೇರಿಗಳ ಮೂಲ ಸೌಕರ್ಯ ಅಭಿವೃದ್ಧಿ ಕಾರ್ಯ ಒಂದು ತಿಂಗಳಲ್ಲಿ ಪ್ರಾರಂಭಿಸಬೇಕು ಎಂದು ಸೂಚಿಸಿದರು.7500 ಕೋಟಿ ಅನುದಾನಕ್ಕೆ ಬೇಡಿಕೆ: ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ ಅನುದಾನ ಕಡಿಮೆ ಇದ್ದು ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಚಾಲ್ತಿಯೋಜನೆಗಳಿಗೂ ಅನುದಾನ ಕೊರತೆ ಇದೆ.ಸಿಬ್ಬಂದಿಗೆ ವೇತನ, ಭತ್ಯೆಗೂ ಕಷ್ಟ ಆಗಿದೆ ಎಂದು ಸಭೆಯಲ್ಲಿ ಪ್ರಸ್ತಾಪವಾಯಿತು.’ಬಜೆಟ್ ಗೆ ಮುನ್ನ ಯಾವ ಯೋಜನೆಗಳಿಗೆ ಅನುದಾನದ ಅಗತ್ಯವಿದೆ ಎಂಬ ಬಗ್ಗೆ ಪ್ರಸ್ತಾವ ಸಲ್ಲಿಸಿ. 3500 ಕೋಟಿ ಅನುದಾನಕ್ಕೆ ಬೇಡಿಕೆ ಇಡೋಣ’ ಎಂದು ಸಚಿವರು ತಿಳಿಸಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಬಿ.ವೆಂಕಟೇಶ್ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


