ಸರಗೂರು: ಬೆಳೆಯುವ ಮಕ್ಕಳ ಪೌಷ್ಟಿಕಾಂಶ ಹೀರಿ ಬೆಳೆಯುವ ಜಂತು ಹುಳಗಳ ನಿವಾರಣೆಗಾಗಿ ಅಲ್ಪೆಂಡಝೋಲ್ ಮಾತ್ರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಸೇವಿಸುವಂತೆ ಶಿಕ್ಷಕರು ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಪಾರ್ಥ ಸಾರಥಿ ಹೇಳಿದರು.
ತಾಲ್ಲೂಕಿನ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರರಂದು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ನಡೆದ ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.
ಬಯಲು ಶೌಚದಿಂದಾಗಿ, ಬರಿಗಾಲಿನಲ್ಲಿನಡೆದಾಗ ಹಾಗೂ ಕಲುಷಿತ ಕೈಗಳಿಂದ ಆಹಾರ ಸೇವನೆ ಮಾಡುವುದರಿಂದ ಜಂತು ಹುಳುಗಳು ದೇಹದೊಳಗೆ ಪ್ರವೇಶಿಸಿ ಕರುಳಿನಲ್ಲಿವಾಸಿಸುವ ಜೀವಿಗಳಾಗಿ ಬೆಳೆಯುತ್ತದೆ. ಇವುಗಳು ಮಕ್ಕಳಲ್ಲಿನ ಪೌಷ್ಠಿಕಾಂಶ ಹೀರುವುದರಿಂದ ರಕ್ತ ಹೀನತೆ ಉಂಟು ಮಾಡಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಶಾಲೆಯ ಮಕ್ಕಳಲ್ಲಿನ ಕಲಿಕಾ ಸಾಮರ್ಥ್ಯ ಮತ್ತು ಆರೋಗ್ಯ ಸುಧಾರಿಸುವ ನಿಟ್ಟಿನಲ್ಲಿಜಂತು ಹುಳುಗಳು ದೇಹದೊಳಗೆ ಪ್ರವೇಶಿಸದಂತೆ ಮುನ್ನಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದರು.


ಹಿಂದೆ ಬಹುತೇಕ ಮಕ್ಕಳಲ್ಲಿಪೂರ್ವ ಕಾಲದಲ್ಲಿಜಂತು ಹುಳು ಸಮಸ್ಯೆ ಕಾಣುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿಆ ಸಮಸ್ಯೆ ತುಂಬಾ ಕಡಿಮೆಯಾಗಿದೆ. ಜಂತುಹುಳಗಳ ನಿವಾರಣೆಗಾಗಿ ಅಲ್ಪೆಂಡಝೋಲ್ ಮಾತ್ರೆ ಪ್ರತಿಯೊಬ್ಬ ವಿದ್ಯಾರ್ಥಿ ಸೇವಿಸಿಬೇಕು. ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಿ, ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಳ್ಳುವುದರ ಜತೆಗೆ ತಮ್ಮ ಸುತ್ತಮತ್ತಲಿನ ಜನತೆಗೂ ಈ ಜಂತುಹುಳುವಿನ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ನಾಗರಾಂ ಶೆಟ್ಟಿ, ಸಿಬ್ಬಂದಿಗಳಾದ ಪುಷ್ಪಲತಾ, ಶಾಂತಿ, ಜಗದೀಶ್, ಹಾಗೂ ಮತ್ತು ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


