ತುಮಕೂರು: ತುಮಕೂರು ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಹಲವಾರು ಅನಾಹುತಗಳು ಸಂಭವಿಸಿದ್ದು, ಜಾನುವಾರು ಮೈ ತೊಳೆಯಲು ಹೋದ ಯುವಕ ನೀರು ಪಾಲಾಗಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಬಂಗೆನಹಳ್ಳಿ ಕೆರೆಯಲ್ಲಿ ನಡೆದಿದೆ.
ಗುಬ್ಬಿಯ ಹರಿವೇಸಂದ್ರ ಗ್ರಾಮದ ನಿವಾಸಿ ಮನೋಜ್ (22) ಮೃತ ಯುವಕ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಗ್ರಾಮದ ಕೆರೆಯಲ್ಲಿ ಜಾನವಾರು ಮೈ ತೊಳೆಯಲು ಹೋದ ಮನೋಜ್ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ.
ನಿನ್ನೆಯಿಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಇಂದು ಮೃತದೇಹ ಪತ್ತೆಯಾಗಿದೆ. ಘಟನೆ ಸಂಬಂಧ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy