nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026
    Facebook Twitter Instagram
    ಟ್ರೆಂಡಿಂಗ್
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    • ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ
    • ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ
    ಕೊರಟಗೆರೆ June 28, 2025

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    By adminJune 28, 2025No Comments2 Mins Read
    dialysis machine unveiled

    ಕೊರಟಗೆರೆ : ಗ್ರಾಮೀಣ ಭಾಗದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಅದನ್ನು ನಿರ್ವಹಿಸುವುದು ಬಹಳ ಕಷ್ಠ. ಡಯಾಲಿಸಿಸ್ ಸೆಂಟರ್ ಕೊರಟಗೆರೆ ಜನತೆಯ ಆಸ್ತಿ, ಇದನ್ನು  ನೀವೇ ಕಾಪಾಡಿಕೊಳ್ಳಬೇಕು ಎಂದು ಪಾವಗಡ ರಾಮಕೃಷ್ಣ ಆಶ್ರಮದ ಜಪಾನಂದ ಸ್ವಾಮೀಜಿ ತಿಳಿಸಿದರು.

    ಸಿದ್ದರಬೆಟ್ಟ ರೋಟರಿ ಸಂಸ್ಥೆ ಮತ್ತು ರೇಣುಕಾ ಆಸ್ಪತ್ರೆ ಸಹಯೋಗದಲ್ಲಿ ನೂತನವಾಗಿ ಆರಂಭಿಸಿದ ರೋಟರಿ–ರೇಣುಕಾ ಡಯಾಲಿಸಿಸ್ ಸೆಂಟರ್‌ನ್ನು ಶ್ರೀಗಳು ತಮ್ಮ ಅಮೃತ ಹಸ್ತದಿಂದ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.

    ರಾಮಕೃಷ್ಣ ಆಶ್ರಮದಿಂದ ಈಗಾಗಲೇ ಮಧುಗಿರಿಯಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಪ್ರತಿನಿತ್ಯ ಹತ್ತಾರು ಮಂದಿ ರೋಗಿಗಳಿಗೆ ಹಾರೈಕೆ ಮಾಡುತ್ತಿದ್ದು, ಉಚಿತವಾಗಿ 30 ಸಾವಿರ ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ, 650 ಮಂದಿ ಅಂಗವಿಕಲರಿಗೆ ಚಿಕಿತ್ಸೆ, ಇಲ್ಲಿಯವರೆಗೂ ತುಮಕೂರು ವಿವಿಯಲ್ಲಿ 8.60 ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಆಹಾರ ಒದಗಿಸಿದ್ದು, 4 ಕೋಟಿಗೂ ಅಧಿಕ ಹಣ ಖರ್ಚಾಗಿದೆ. ಆಧ್ಯಾತ್ಮಿಕ ಶಕ್ತಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ಶ್ರೀಮಠ ಸಾಗುತ್ತಿದೆ ಎಂದು ಹೇಳಿದರು.

    ಸಿದ್ದರಬೆಟ್ಟ ಶ್ರೀಮಠದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ರೋಟರಿ ಸಂಸ್ಥೆಯಲ್ಲಿ ಒಳ್ಳೆಯ ಹೃದಯ ವ್ಯಕ್ತಿತ್ವದ ಗಣ್ಯ ವ್ಯಕ್ತಿಗಳಿದ್ದಾರೆ. ಸಂಸ್ಥೆಯಿಂದ ಪ್ರಾರಂಭಿಸಿದ ಕಾಮಧೇನು ಯೋಜನೆಯು 220 ಕುಟುಂಬಗಳಿಗೆ ಬೆಳಕನ್ನು ಚೆಲ್ಲಿದೆ. ಸಂಸ್ಥೆ ಅಧ್ಯಕ್ಷ ರಘು ಬೆಂಗಳೂರಿನ ಕಿಡ್ನಿ ಫೌಂಡೇಶನ್ ಸಹಕಾರದಿಂದ ರೇಣುಕಾ ಆಸ್ಪತ್ರೆ ವೈದ್ಯ ಡಾ.ಮಲ್ಲಿಕಾರ್ಜುನ್ ಸಹಯೋಗದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಬಡಜನರಿಗೆ ಉಚಿತವಾಗಿ ಡಯಾಲಿಸಿಸ್ ಚಿಕಿತ್ಸೆ ನೀಡಲು ಸಂಸ್ಥೆ ಮುಂದಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ಎಲೆರಾಂಪುರ ಶ್ರೀಮಠದ ಡಾ.ಹನುಮಂತನಾಥ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ರೇಣುಕಾ ಆಸ್ಪತ್ರೆಯ ಡಾ.ಮಲ್ಲಿಕಾರ್ಜುನ್  ಗ್ರಾಮೀಣ ಭಾಗದ ಜನರ ಆರೋಗ್ಯ ಸುಧಾರಣೆಗೆ ಸಂಜೀವಿನಿ ಔಷಧಿಯಂತೆ ಕೆಲಸ ಮಾಡುತ್ತಾರೆ. ಡಯಾಲಿಸಿಸ್ ಚಿಕಿತ್ಸೆ ರೋಗಿಗಳ ಬದುಕು ನಿಜಕ್ಕೂ ಕಷ್ಠಕರ. ಡಯಾಲಿಸಿಸ್ ಕೇಂದ್ರ ನಿರ್ವಹಣೆಯು ಆ ಕ್ಷಣದಲ್ಲಿ ಹುಟ್ಟಿದ ಮಗುವನ್ನು ಹಾರೈಕೆ ಮಾಡಿದ್ದಂತೆ. ಆದ್ದರಿಂದ ಡಯಾಲಿಸಿಸ್ ಕೇಂದ್ರ ನಡೆಯುವುದೇ ಬೇಡ, ಮನುಕುಲ ಆದಷ್ಟು ಒತ್ತಡ ಬದುಕನ್ನು ಕಡಿಮೆ ಮಾಡಿ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕಿದೆ ಎಂದು ಹೇಳಿದರು.

    ತಹಶೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ಮನುಷ್ಯನು ಆಡಂಬರದ ಬದುಕಿಗೆ ಅವಕಾಶ ನೀಡಬಾರದು. ರೋಟರಿ ಸಂಸ್ಥೆಯು ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಬಡ ರೋಗಿಗಳ ಸಂಕಷ್ಟಕ್ಕೆ ನೆರವಾಗಿದೆ. ಕೊರಟಗೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಪರಮ ಪೂಜ್ಯರ ಅಮೃತ ಹಸ್ತದಿಂದ ಡಯಾಲಿಸಿಸ್ ಕೇಂದ್ರ ಇಂದು ಲೋಕಾರ್ಪಣೆಗೊಂಡಿದೆ. ಆರೋಗ್ಯವಂತ ಬದುಕಿಗೆ ಪ್ರತಿಯೊಬ್ಬರು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯಪಾಲ ಮಹದೇವ್‌ಪ್ರಸಾದ್, ರೋಟರಿ ಅಧ್ಯಕ್ಷ ರಘು ಕೆ.ಎನ್, ಬೆಂಗಳೂರು ಕಿಡ್ನಿ ಫೌಂಡೇಶನ್ ಡಾ.ಪಿ.ಶ್ರೀರಾಮ್, ಆರ್‌ಟಿಎನ್ ವಸಂತ್‌ ಚಂದ್ರ, ಡಾ. ಮಲ್ಲಿಕಾರ್ಜುನ್, ರೇಣುಕಾ, ಡಾ.ಆತ್ಮರಾಮ್ ಶೆಟ್ಟಿ, ಡಾ.ಲತಾ, ಗಂಗಾಧರ ಶಾಸ್ತ್ರಿ,  ಬಾಲಾಜಿ ದರ್ಶನ್ ಸೇರಿದಂತೆ ಇತರರು ಇದ್ದರು.

    ರೋಟರಿ ಸಂಸ್ಥೆಯು ಸಾಮಾಜಿಕ ಕಳಕಳಿಯನ್ನು ಒತ್ತು ಗ್ರಾಮೀಣ ಭಾಗದ ಜನರಿಗೆ ಕಾಮಧೇನು ಯೋಜನೆ, ಬೋರ್‌ವೆಲ್ ರಿಚಾರ್ಜ್, ಡಯಾಲಿಸಿಸ್ ಸೆಂಟರ್ ಸ್ಥಾಪಿಸುವ ಉದ್ದೇಶವಿತ್ತು. ಬೆಂಗಳೂರಿನ ಕಿಡ್ನಿ ಪೌಂಡೇಷನ್ ಜೊತೆ ಹಲವು ಸಂಸ್ಥೆಗಳ ಸಹಕಾರದಿಂದ ಬಡ ಜನರ ಅನುಕೂಲಕ್ಕೆ ರೇಣುಕಾ ಆಸ್ಪತ್ರೆ ಸಹಯೋಗದಲ್ಲಿ ಡಯಾಲಿಸಿಸ್ ಸೆಂಟರ್ ಸ್ಥಾಪಿಸಿ ಶ್ರೀಗಳ ಅಮೃತ ಹಸ್ತಾದಿಂದ ಲೋಕಾರ್ಪಣೆ ಗೊಳಿಸಿದೆ. ನನ್ನ ಅವಧಿಯ ಸಾಮಾಜಿಕ ಕಾರ್ಯಕ್ರಮವು ಮನಸ್ಸಿಗೆ ಹರ್ಷ ನೀಡಿದೆ.

    — ರಘು ಕೆ.ಎನ್, ಅಧ್ಯಕ್ಷ, ಸಿದ್ದರಬೆಟ್ಟ ರೋಟರಿ ಸಂಸ್ಥೆ.


     30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆ:

    ಬೆಂಗಳೂರಿನ ಕಿಡ್ನಿ ಫೌಂಡೇಶನ್ ಸಹಕಾರದಿಂದ ಸಿದ್ದರಬೆಟ್ಟ ರೋಟರಿ–ರೇಣುಕಾ ಡಯಾಲಿಸಿಸ್ ಸೆಂಟರ್‌ನ್ನು ಕೊರಟಗೆರೆಯ ರೇಣುಕಾ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಿದ್ದು, ಪಾವಗಡ ಶ್ರೀ ಜಪಾನಂದ ಸ್ವಾಮೀಜಿ, ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಎಲೆರಾಂಪುರ ಹನುಮಂತನಾಥ ಸ್ವಾಮೀಜಿಯವರ ಅಮೃತ ಹಸ್ತಾದಿಂದ 30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರವನ್ನು ಲೋಕಾರ್ಪಣೆಗೊಳಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಶಿವಮೊಗ್ಗದಲ್ಲಿ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ…

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.