ಬೆಳಗಾವಿ: ಘಟಪ್ರಭಾ ಪಟ್ಟಣದಲ್ಲಿ ರಾಜ್ಯಸಭೆ ಸಂಸದ ಈರಣ್ಣಾ ಕಡಾಡಿ ಕಾರಿಗೆ ಸತೀಶ ಜಾರಕಿಹೊಳಿ ಬೆಂಬಲಿಗರಿಂದ ಘೇರಾವ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಬಿಜೆಪಿ ಉಪಾಧ್ಯಕ್ಷ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಣದಿಂದ ಗೌಪ್ಯ ಸಭೆ ನಡೆದಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಭೆ ಹಮ್ಮಿಕೊಂಡಿದ್ದು, ಪ್ರಮುಖವಾಗಿ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ನಿನ್ನೆ ಈರಣ್ಣಾ ಕಡಾಡಿ ಅವರ ಕಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಅವರ ಬೆಂಬಲಿಗರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದನ್ನು ಇಲ್ಲಿ ಚರ್ಚಿಸಲಾಗಿದೆ ಎನ್ನಲಾಗುತ್ತಿದೆ.
ಇತ್ತ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಜಿಲ್ಲಾ ಬಿಜೆಪಿ ನಾಯಕರು, ಗೌಪ್ಯ ಸಭೆ ಆಯೋಜಿಸಿರುವುದು ಜಿಲ್ಲೆಯಲ್ಲಿ ಮಾತ್ರ ತೀವ್ರ ಕುತೂಹಲ ಕೆರಳಿಸಿದೆ.
ಇನ್ನು ಸಭೆಯಲ್ಲಿ ಶಾಸಕ ಅಭಯ ಪಾಟೀಲ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಮಾಜಿ ಶಾಸಕ ಸಂಜಯ್ ಪಾಟೀಲ್, ಡಾ. ವಿಶ್ವನಾಥ ಪಾಟೀಲ, ಅರವಿಂದ ಪಾಟೀಲ, ಮಹಾಂತೇಶ ಕವಟಗಿಮಠ, ನಿಗಮ ಮಂಡಳಿ ಅಧ್ಯಕ್ಷ ಮಾರುತಿ ಅಷ್ಟಗಿ ಭಾಗಿಯಾಗಿದ್ದರು. ಸಭೆಯಲ್ಲಿ ಬಿಜೆಪಿಯ ಜಾರಕಿಹೊಳಿ ಬ್ರದರ್ಸ್ ಮತ್ತವರ ಬೆಂಬಲಿತರನ್ನು ಹೊರಗಿಟ್ಟು ಸಭೆ ನಡೆಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


