ತುಮಕೂರು: ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸರ್ವೇಲೆನ್ಸ್ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಫೆಬ್ರವರಿ 4ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದವರಗೆ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರ ಆರೋಗ್ಯ ರಕ್ಷಣೆ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ “United by Unique” ಎಂಬ ಧ್ಯೇಯ ವಾಕ್ಯದೊಂದಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಾಥಾ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳು, ಜಿಲ್ಲಾ ಶುಶ್ರೂಷ ತರಬೇತಿ ಕೇಂದ್ರ, ಶ್ರೀದೇವಿ ನರ್ಸಿಂಗ್ ಕಾಲೇಜು, ಶ್ರೀ ಸಿದ್ಧಗಂಗಾ ನರ್ಸಿಂಗ್ ಕಾಲೇಜು, ರಮಣ ಮಹರ್ಷಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx