ಪಾಟ್ನಾ: ಬಿಹಾರದಲ್ಲಿ ಶನಿವಾರದಿಂದ ಜಾತಿ ಆಧಾರಿತ ಜನಗಣತಿ ಆರಂಭವಾಗಿದೆ. ಈ ಮೂಲಕ ಎಲ್ಲಾ ಜಾತಿಗಳು, ಉಪ ಜಾತಿಗಳು, ಧರ್ಮಗಳ ಮಾಹಿತಿ ಕಲೆ ಹಾಕಲು ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಇದೊಂದು ಐತಿಹಾಸಿಕ ಹೆಜ್ಜೆಯಾಗಿದ್ದು, ಸಮಾಜದಲ್ಲಿನ ದುರ್ಬಲ ವರ್ಗಗಳಿಗೆ ಸರ್ಕಾರದ ಕಲ್ಯಾಣ ಯೋಜನೆಗಳನ್ನು ತಲುಪಿಸಲು ಜನಗಣತಿಯಿಂದ ವೈಜ್ಞಾನಿಕವಾಗಿ ಮಾಹಿತಿ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರದಿಂದ ಐತಿಹಾಸಿಕ ಹೆಜ್ಜೆಯನ್ನಿಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ, ಜನರಿಗೆ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ವೈಜ್ಞಾನಿಕವಾಗಿ ಮಾಹಿತಿ ದೊರೆಯಲಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


