ಜಾತ್ಯಾತೀತ ಜನತಾದಳ ಉತ್ತರ ಕರ್ನಾಟಕದಲ್ಲಿ ತನ್ನದೇಯಾದ ಶಕ್ತಿಯನ್ನು ಹೊಂದಿದೆ ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಲು ಚುನಾವಣೆಯಲ್ಲಿ ತೊಡಗಿಕೊಳ್ಳುವಂತೆ ಮಾಡಲು ನಾನು ಬಂದಿದ್ದೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ.
ಖಾನಾಪುರ್ ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ನಾಸಿರ್ ಭಗವಾನ್ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಟಿಕೆಟ್ ಹಂಚಿಕೆಯ ಕುರಿತು ಪಕ್ಷದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಪ್ರಶ್ನೆಗೆ ಉತ್ತರಿಸಿದವರು ಹಾಸನದಲ್ಲಿ ಭವಾನಿ ರೇವಣ್ಣ ಅಭ್ಯರ್ಥಿ ಕುರಿತು ಈಗಾಗಲೇ ರೇವಣ್ಣ ಅವರು ಉತ್ತರ ನೀಡಿದ್ದಾರೆ ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ ಮಾಜಿ ಪ್ರಧಾನ ಮಂತ್ರಿಗಳು ದೇವೇಗೌಡರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ನಾನು ಒಮ್ಮತದ ನಿರ್ಣಯದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಸ್ಪಷ್ಟ ಪಡಿಸಿದರು.
ಬೆಳಗಾವಿಯಲ್ಲಿ ಭಾರತೀಯ ಜನತಾ ಪಕ್ಷದ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲಾದ್ ಜೋಶಿ ಪಂಚ ರತ್ನ ಯಾತ್ರೆಗೆ ಟೀಕಿಸುತ್ತ ಜೆಡಿಎಸ್ ಪಂಚರತ್ನ ಯಾತ್ರೆ ಅಲ್ಲ ನವಗ್ರಹಗಳ ಯಾತ್ರೆ ಪ್ರಾರಂಭಿಸಬೇಕು ಎಂದು ಟಾಂಗ್ ನೀಡಿದರು. ಅದಕ್ಕೆ ಪ್ರತಿ ಉತ್ತರವಾಗಿ ಸಿಎಂ ಇಬ್ರಾಹಿಂ ಪ್ರಹ್ಲಾದ್ ಜೋಶಿ ನೀವು ಭ್ರಷ್ಟಾಚಾರದಲ್ಲಿ ಮಲಗಿದ್ದೀರಿ ಮನೆಯ ಮೇಲೆ ಮನೆ ಕಟ್ಟುತ್ತಾ ಇದ್ದೀರಿ ನೀವು ನಮಗೆ ಪಾಠ ಹೇಳಲು ಬರಬೇಡಿ ಎಂದು ತಿರುಗೇಟು ನೀಡಿದರು.
ಕೇಂದ್ರ ಸರ್ಕಾರ ನಿನ್ನೆ ಮಂಡಿಸಿರುವ ಬಜೆಟ್ ಯಾರ ಪರವಾಗಿದೆ, ಇದು ಅಡಾನಿ ಮತ್ತು ಅಂಬಾನಿ ಪರವಾಗಿದೆ ಜನಸಾಮಾನ್ಯರು ಬೆಲೆ ಏರಿಕೆಯಿಂದ ಬೇಸತ್ತು ಹೋಗಿದ್ದಾರೆ .ಕೇಂದ್ರದ ಬಜೆಟ್ ಆರ್ಥಿಕತೆ ದಿವಾಳಿತನ ತೋರಿಸುತ್ತದೆ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆಯೋ ಅಥವಾ ಕಿಂಗ್ ಆಗ್ಲಿದಿಯೋ ಎಂಬ ಪ್ರಶ್ನೆಗೆ ಜೆಡಿಎಸ್ ನೂರರಷ್ಟು ಕಿಂಗ್ ಆಗಿದೆ ರಾಜ್ಯದಲ್ಲಿ ಸಂಪೂರ್ಣ ಬಹುಮತದಿಂದ ಸರಕಾರ ರಚನೆ ಮಾಡಲಿದ್ದೇವೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


