ನೆಲಮಂಗಲ: ಮಣ್ಣೆಯ ಗ್ರಾಮದಲ್ಲಿರುವ ಪುರಾತನ ದೇವಾಲಯ ದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲಮಂಗಲ ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಮಹಿಳಾ ಘಟಕದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.
ಮಹಿಳಾ ಘಟಕದ ಅಧ್ಯಕ್ಷರಾದ ವರ್ಷರವರ ನೇತೃತ್ವದಲ್ಲಿ ಅವರ ನೇತೃತ್ವದಲ್ಲಿ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಸುತ್ತಮುತ್ತ ಬೆಳೆದಿರುವ ಗಿಡಗಂಟಿಗಳನ್ನು ತೆರವುಗೊಳಿಸುವ ಮೂಲಕ ಶ್ರಮದಾನ ನಡೆಸಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಶಶಿದಾಸ್, ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷರಾದ ಮಾಲಾ, ಸಂಘಟನೆಯ ಪದಾಧಿಕಾರಿಗಳಾದ ಆಕಾಶ್, ಚಂದುರಾವ್, ನಿಕೇಶ್, ನವೀನ್, ಸಿದ್ದರಾಮು, ಲೀವಿಂಗ್ ಸಾಪ್ ಹಾಟ್ಸ್ ಸಂಸ್ಥೆ, ಕೆರೇಕತಿಗನುರು ಗಂಗಣ್ಣ, ಗೋವೆನ ಹಳ್ಳಿ ಪುನೀತ್, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸ್ವಯಂ ಸೇವಕರು, ಗ್ರಾಮ ಪಂಚಾಯ್ತಿ ಸದಸ್ಯರಾದ ಶಂಕರ್, ವಿಜಯ್, ವೀಣಾ, ರಜಿನಿ, ಸ್ವಯಂ ಸೇವಕರು ಹಾಗೂ ಊರಿನ ಎಲ್ಲಾ ಗ್ರಾಮಸ್ಥರು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ.ಎಂ.ಎನ್.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB