ಕೋಲಾರ: ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಪೆಟ್ರೋಲ್ ಉಚಿತ ಎಂದು ಹೇಳಲಾಗಿತ್ತು. ಜನರು ಸಿಕ್ಕದ್ದೇ ಜಾನ್ಸ್ ಎಂಬಂತೆ ಉಚಿತ ಪೆಟ್ರೋಲ್ ಗೆ ಮುಗಿ ಬಿದ್ದಿದ್ದಾರೆ.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಸೇರಿದಂತೆ ಹಲವಾರು ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರು. ಹೀಗಾಗಿ ಮಾಲೂರು ಜೆಡಿಎಸ್ ಅಭ್ಯರ್ಥಿ ಜಿ.ಇ.ರಾಮೇಗೌಡ ಬೈಕ್ ರ್ಯಾಲಿಯಲ್ಲಿ ಪಾಲ್ಗೊಳ್ಳುವವರಿಗೆ ಉಚಿತ ಪೆಟ್ರೋಲ್ ವ್ಯವಸ್ಥೆಯನ್ನು ಮಾಡಿದ್ದರು.
ಬೈಕ್ ರಾಲಿಗೆ ಬಂದವರಿಗೆ ಜೆಡಿಎಸ್ ಟಿ ಶರ್ಟ್, ಉಚಿತ ಪೆಟ್ರೋಲ್ ಹಾಗೂ ಮಹಿಳೆಯರಿಗೆ ಟೋಕನ್ ನೀಡಲಾಗಿದ್ದು, ಕಾರ್ಯಕ್ರಮ ಮುಗಿದ ಬಳಿಕ ಅಕ್ಕಿಮೂಟೆ ನೀಡುವ ಭರವಸೆ ನೀಡಲಾಗಿತ್ತು ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


