ತುಮಕೂರು: ಜಿಲ್ಲೆಗೆ ಮಂಜೂರಾಗಿರುವ ನೀರನ್ನು ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಮೂಲಕ ಮಾಗಡಿ ತಾಲೂಕಿಗೆ ತೆಗೆದುಕೊಂಡು ಹೋಗಲು ರೂಪಿಸಿರುವ ಯೋಜನೆಯಿಂದ ತುಮಕೂರು ಜಿಲ್ಲೆಗೆ ಬಹಳ ಅನ್ಯಾಯವಾಗುತ್ತದೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕಾರ್ಯಕತವಾಗಲು ಬಿಡುವುದಿಲ್ಲ ಎಂದು ಜೆಡಿಎಸ್ ಮುಖಂಡ ಶಾಂತಕುಮಾರ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಟನೆ ಕೈಗೊಂಡಿರುವುದರಿಂದ ಸರ್ಕಾರ ಯೋಜನೆಯನ್ನು ನಿಲ್ಲಿಸಬೇಕು. ತಿಪಟೂರು ಜಾತ್ಯಾತೀತವಾಗಿ ಸಂಪೂರ್ಣ ಬಂದ್ ಗೆ ಕರೆ ನೀಡಲಾಗಿದೆ. ತಿಪಟೂರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಮೊದಲೇ ತುಮಕೂರು ಜಿಲ್ಲೆಗೆ ಮಂಜೂರಾಗಿರುವ ನೀರನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ನಮ್ಮ ಜಿಲ್ಲೆಯ ನೀರಿಗೆ ಕೈ ಹಾಕಿದರೆ ನಾವು ಸುಮ್ಮನಿರುವುದಿಲ್ಲ ಎಂದು ಅವರು ಎಚ್ಚರಿಸಿದರು.
ವಿರೋಧ ಪಕ್ಷದಲ್ಲಿದ್ದಾಗ ಮೇಕೆದಾಟು ಯೋಜನೆ ಜಾರಿಗೆ ತೊಡೆತಟ್ಟಿ ನಿಂತಿದ್ದ ಮುಖಂಡರು ಈಗ ಅವರ ಪಕ್ಷದವರೇ ಅಧಿಕಾರವಿದ್ದಲ್ಲಿದ್ದಾಗ ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಮಾಗಡಿ ತಾಲೂಕಿಗೆ ಮೇಕೆದಾಟು ಯೋಜನೆಯಿಂದ ನೀರು ಪಡೆದುಕೊಳ್ಳಲಿ ಎಂದರು.
ಈ ಸುದ್ದಿಗೋಷ್ಠಿಯಲ್ಲಿ ಬತ್ತಿಹಳ್ಳಿರಾಜಣ್ಣ ನಾರಾಯಣಪ್ಪ ಹಲವಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA